ಕಲಬುರಗಿ: ಯಾವುದೇ ಸಮುದಾಯ ಆರ್ಥಿಕವಾಗಿ ಮುಂದೆ ಬರಬೇಕಾದರೆ ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಬೇಕು ಎಂದು ಬ್ರಾಹ್ಮಣ ಸಹಾಯ ಸಂಘದ ಅಧ್ಯಕ್ಷ ವೆಂಕಟರಾವ ದೇಶಪಾಂಡೆ ಹೇಳಿದರು.

ನಗರದ ನೂತನ ವಿದ್ಯಾಲಯ ಸಂಸ್ಥೆಯ ಅನಂತರಾವ ದೇಶಮುಖ ಸಭಾಂಗಣದಲ್ಲಿ ಬ್ರಾಹ್ಮಣ ಸಹಾಯ ಸಂಘ ಹಾಗೂ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಆಶ್ರಯದಲ್ಲಿ ಸೋಮವಾರ ಜರುಗಿದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಬ್ರಾಹ್ಮಣ ಸಹಾಯ ಸಂಘವು ಪ್ರತಿ ವರ್ಷ ಹಲವು ವಿದ್ಯಾರ್ಥಿಗಳ ಓದಿಗೆ ಆರ್ಥಿಕ ನೆರವು ನೀಡುತ್ತಿದೆ. ಈ ವರ್ಷ 42 ವಿದ್ಯಾರ್ಥಿಗಳಿಗೆ ತಲಾ ₹ 5 ಸಾವಿರದಂತೆ ಸುಮಾರು ₹ 2.5 ಲಕ್ಷ ನೀಡಲಾಗಿದೆ’ ಎಂದರು.

ವೈದ್ಯ ಡಾ. ವಿಜಯ ಮೋಹನ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜಿಲ್ಲಾ ಪ್ರತಿನಿಧಿ ಪ್ರಮೋದ ದೇಶಪಾಂಡೆ, ಬ್ರಾಹ್ಮಣ ಸಹಾಯ ಸಂಘದ ಕಾರ್ಯದರ್ಶಿ ದಾಮೋದರ ಮಲಕೂಡ ಹಾಗೂ ಸಂಘದ ಸದಸ್ಯರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-34-313076602

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.