ಕಲಬುರಗಿ: ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ತ್ರೀಶಾ ಎಜುಕೇಶನ್ ಚಾರಿಟಬಲ್ ಮತ್ತು ವೆಲ್ಫೇರ್ ಟ್ರಸ್ಟ್ ಹಾಗೂ ಪ್ರಿಯದರ್ಶಿನಿ ಗ್ರಾಮೀಣ ಅಭಿವೃದ್ಧಿ ಫೌಂಡೇಶನ್ ಮತ್ತು ಸಂಸ್ಥೆಯ ಸಹಯೋಗದಲ್ಲಿ ಬುದ್ಧ, ಬಸವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಜಯಂತ್ಯುತ್ಸವದ ಅಂಗವಾಗಿ ‘ಬುದ್ಧ, ಬಸವ, ಅಂಬೇಡ್ಕರ್ ರಾಜ್ಯರತ್ನ ಪ್ರಶಸ್ತಿ’ ಪ್ರದಾನ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಶಾಸಕ ಅಲ್ಲಮಪ್ರಭು ಪಾಟೀಲ ಉದ್ಘಾಟಿಸಿ ಮಾತನಾಡಿ, ‘ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ತತ್ವಗಳು ಸಮಾಜದಲ್ಲಿ ಸಮಾನತೆ, ಸಹೋದರತೆ ಮತ್ತು ಸಾಮಾಜಿಕ ನ್ಯಾಯದ ಬಲವಾದ ಸಂದೇಶವನ್ನು ಸಾರುತ್ತವೆ’ ಎಂದು ಹೇಳಿದರು.

‘ಯುವಜನತೆ ಮಹನೀಯರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಶಿಕ್ಷಣ ಮತ್ತು ಸಂವಿಧಾನದ ಮೌಲ್ಯಗಳನ್ನು ಉಳಿಸುವ ಮೂಲಕ ಸಮಾಜದಲ್ಲಿ ಶಾಂತಿ ಹಾಗೂ ಪ್ರಗತಿ ಸಾಧಿಸಲು ಸಾಧ್ಯ’ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಕಾಂಗ್ರೆಸ್ ಮುಖಂಡ ನೀಲಕಂಠರಾವ ಮೂಲಗೆ, ಸಿಪಿಐ ಕುಬೇರ ರಾಯಮಾನೆ, ಸುರೇಶ ಬಡಿಗೇರ, ಜಗನ್ನಾಥ ಸೂರ್ಯವಂಶಿ, ವಿಜಯಕುಮಾರ ಕಟ್ಟಿಮನಿ, ಮಲ್ಲಣ್ಣ ಮಡಿವಾಳ, ಮಲ್ಲಿನಾಥ ನಾಗನಳ್ಳಿ, ಗುರು ಬಂಡಿ, ಸವಿತಾ ನಾಶಿ, ದೇವಿಕಾ ಶೆಟ್ಟಿ, ಅನ್ನಪೂರ್ಣ ಸಂಗೋಳಗಿ, ಅಶ್ವಿನಿ ಚವ್ಹಾಣ, ಸುಮಾ ಎಸ್. ಕವಲ್ದಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರಗಳ 27 ಮಂದಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-34-2024888053

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.