ಕಲಬುರಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ(ಸಿಯುಕೆ)ದಲ್ಲಿ 2026–27ನೇ ಸಾಲಿನ ಸ್ನಾತಕೋತ್ತರ ಪದವಿ(ಪಿ.ಜಿ) ಕೋರ್ಸ್ಗಳಿಗೆ ಆನ್ಲೈನ್ ಮೂಲಕ ಪ್ರವೇಶಾತಿ ಆರಂಭವಾಗಿದೆ ಎಂದು ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿಯುಇಟಿ(ಪಿ.ಜಿ) ಅಥವಾ ಗೇಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಪ್ರವೇಶಾತಿಗೆ ಅರ್ಹರು. ವಿಶ್ವವಿದ್ಯಾಲಯದ ‘ಸಮರ್ಥ’ ಪೋರ್ಟಲ್: https://cukcuet.samarth.edu.in/pg/ ಮೂಲಕ ಜೂನ್ 10ರ ಬೆಳಿಗ್ಗೆ 11 ಗಂಟೆಯವರೆಗೆ ನೋಂದಣಿ ಮಾಡಿಕೊಳ್ಳಬೇಕು’ ಎಂದರು.

‘ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ವಿದ್ಯಾರ್ಥಿಗಳು ₹500, ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳು ₹100 ಶುಲ್ಕ ಪಾವತಿಸಬೇಕು. ನೋಂದಾಯಿತ ಅಭ್ಯರ್ಥಿಗಳ ಪಟ್ಟಿಯನ್ನು ಜೂನ್ 10ರಂದು ಬೆಳಿಗ್ಗೆ 11ಕ್ಕೆ ಸಿಯುಕೆ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು. ಆಕ್ಷೇಪಣೆಗಳಿದ್ದಲ್ಲಿ ಜೂನ್ 11ರ ಬೆಳಿಗ್ಗೆ 11 ಗಂಟೆವರೆಗೆ ಸಲ್ಲಿಕೆಗೆ ಅವಕಾಶವಿರುತ್ತದೆ’ ಎಂದು ತಿಳಿಸಿದರು.

‘ಸಿಯುಕೆಯಲ್ಲಿ ಒಟ್ಟು ಎರಡು ವರ್ಷ ಅವಧಿಯ 34 ಪಿ.ಜಿ. ಕೋರ್ಸ್ಗಳು, ಒಂದು ವರ್ಷ ಅವಧಿಯ 15 ಪಿ.ಜಿ ಕೋರ್ಸ್ಗಳು ಹಾಗೂ ಹಾಸ್ಟೆಲ್ ಸೌಲಭ್ಯ ಇರುತ್ತದೆ. ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಸಂವಿಧಾನದ 371(ಜೆ) ಅನ್ವಯ ಮೀಸಲಾತಿ ಇರುತ್ತದೆ. ಈ ಭಾಗದ ಹೆಚ್ಚಿನ ವಿದ್ಯಾರ್ಥಿಗಳು ಇದರ ಲಾಭ ಪಡೆಯಬೇಕು’ ಎಂದು ಸಲಹೆ ನೀಡಿದರು.

ಕೌಶಲ ಅಭಿವೃದ್ಧಿ ಕಾರ್ಯಕ್ರಮ: ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಸ್ವಾವಲಂಬನೆ ಮತ್ತು ಕೌಶಲ ಅಭಿವೃದ್ಧಿ ಹೆಸರಿನಲ್ಲಿ ಹೊಸ ಕಾರ್ಯಕ್ರಮ ಪರಿಚಯಿಸುತ್ತಿದೆ. ಇದಕ್ಕಾಗಿ ಎನ್.ಬಿ.ಸಿ.ಸಿ. ಸಂಸ್ಥೆಯ ಸಿಎಸ್ಆರ್ ನಿಧಿ ಬಳಕೆ ಮಾಡಲಾಗುತ್ತಿದೆ ಎಂದು ಪ್ರೊ. ಬಟ್ಟು ಸತ್ಯನಾರಾಯಣ ತಿಳಿಸಿದರು.

‘ಆರಂಭದಲ್ಲಿ ಒಂದು ಸೆಮಿಸ್ಟರ್ನಲ್ಲಿ ವಿಶ್ವವಿದ್ಯಾಲಯದ 100 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಮೂರು ತಿಂಗಳ ಕಾಲ ಪ್ರತಿದಿನ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಒಂದೂವರೆ ಗಂಟೆ ವಿ.ವಿ. ಆವರಣದಲ್ಲಿ ಪರಿಸರ ಸಂರಕ್ಷಣೆ, ಗಿಡ ಬೆಳೆಸುವುದು ಅಥವಾ ವಿ.ವಿ ಸುತ್ತಲಿನ ಗ್ರಾಮಗಳಲ್ಲಿ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡಬೇಕಾಗುತ್ತದೆ. ಇದಕ್ಕೆ ವಿದ್ಯಾರ್ಥಿಗಳಿಗೆ ತಿಂಗಳಿಗೆ ₹3,000 ಪ್ರೋತ್ಸಾಹಧನ ನೀಡಲಾಗುತ್ತದೆ’ ಎಂದು ವಿವರಿಸಿದರು.

‘ಎಲ್ಲಾ ಶರಣರ ಆಯ್ದ 2,500 ವಚನಗಳನ್ನು ಬಸವ ಸಮಿತಿ, ಸಿಯುಕೆ ಮತ್ತು ಬೆಂಗಳೂರು ವಿವಿ ಆಶ್ರಯದಲ್ಲಿ ಸ್ಪ್ಯಾನಿಷ್, ಜಪನೀಸ್, ಜರ್ಮನ್ ಭಾಷೆಗಳಿಗೆ ತರ್ಜುಮೆ ಕಾರ್ಯ ಪೂರ್ಣಗೊಂಡಿದ್ದು, ಶೀಘ್ರ ಬಿಡುಗಡೆ ಮಾಡಲಾಗುವುದು’ ಎಂದು ಕುಲಪತಿ ಮಾಹಿತಿ ನೀಡಿದರು.

ಪ್ರಭಾರ ಕುಲಸಚಿವ ಪ್ರೊ. ಬಸವರಾಜ ಕುಬಕಡ್ಡಿ, ಪರೀಕ್ಷಾ ನಿಯಂತ್ರಣಾಧಿಕಾರಿ ಕೋಟ ಸಾಯಿಕೃಷ್ಣ, ಸಾರ್ವಜನಿಕ ಸಂಪರ್ಕಾಧಿಕಾರಿ ಗಣಪತಿ ಸಿನ್ನೂರ, ಶ್ರೀಕಾಂತ ಕುಸೂರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-34-382313695

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.