ಕಲಬುರಗಿ: ‘ಪುಸ್ತಕ ಓದುವುದರಿಂದ ಮನುಷ್ಯನ ಜೀವನ ಪರಿವರ್ತನೆಯಾಗುತ್ತದೆ’ ಎಂದು ಸಿದ್ಧಗಂಗಾ ಮಠದ ಕಿರಿಯ ಸ್ವಾಮೀಜಿ ಶಿವಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ನಗರದ ಸಿದ್ದಲಿಂಗೇಶ್ವರ ಪ್ರಕಾಶನ ಸಂಸ್ಥೆಯ ಬುಕ್ ಮಾಲ್ನಲ್ಲಿ ಗೌರವ ಸ್ವೀಕರಿಸಿ ಮಾತನಾಡಿ, ‘ಬೇರೆಯವರಿಗೆ ಉಡುಗೊರೆಯಾಗಿ ಪುಸ್ತಕಗಳನ್ನು ನೀಡಿ. ಪುಸ್ತಕಗಳಿಂದ ಅವರಲ್ಲಿಯೂ ಜ್ಞಾನ ಬೆಳೆಯುತ್ತದೆ. ನಿಮಗೆ ಒಂದು ಒಳ್ಳೆಯ ಕೆಲಸ ಮಾಡಿದ ಅನುಭವವಾಗುತ್ತದೆ’ ಎಂದರು.

ಸಂಸ್ಥೆಯ ಮುಖ್ಯಸ್ಥ ಬಸವರಾಜ ಕೊನೆಕ್ ಮಾತನಾಡಿ, ‘ಪುಸ್ತಕಗಳು ಶ್ರೀಮಂತರು ಮತ್ತು ವಿದ್ಯಾವಂತರಿಗೆ ಮಾತ್ರ ದೊರೆಯುವಂತಾಗದೆ, ಎಲ್ಲರಿಗೂ ದೊರೆಯುವಂತಾಗಬೇಕು ಎನ್ನುವ ಉದ್ದೇಶದಿಂದ ಮಾಲ್ ಸ್ಥಾಪಿಸಿದ್ದು, ಜನಪ್ರಿಯ ಮಾಲಿಕೆ, ಸಾಹಿತ್ಯ ಮಾಲಿಕೆ, ವಿಜ್ಞಾನ ಮಾಲಿಕೆಯಂಥ ಪುಸ್ತಕಗಳನ್ನು ಪ್ರಕಟಿಸಿ ಓದುಗರನ್ನು ಸೃಷ್ಟಿಸುವ ಕೆಲಸ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮಾಡುತ್ತಿದ್ದೇವೆ’ ಎಂದು ಹೇಳಿದರು.

ಸಿದ್ದಲಿಂಗ ಬಿ.ಕೊನೆಕ್, ಶರಣು ಬಿ.ಕೊನೆಕ್, ಪ್ರೀತಿ ಎಸ್.ಕೊನೆಕ್ ಹಾಗೂ ದೇವಿಂದ್ರಪ್ಪ ಅವಂಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-34-1605504276

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.