ಕಲಬುರಗಿ: ಗುಣಮಟ್ಟದ ಶಿಕ್ಷಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಉತ್ತಮ ಶಿಕ್ಷಣ ಸಂಸ್ಥೆಗಳ ಸಂಖ್ಯೆ ಇನ್ನೂ ಹೆಚ್ಚಾಗಬೇಕು. ನಮ್ಮ ವಿದ್ಯಾರ್ಥಿಗಳು ರಾಜ್ಯದ ಬೇರೆ ಬೇರೆ ಭಾಗಗಳಿಗೆ ವ್ಯಾಸಂಗಕ್ಕೆ ಹೋಗುವುದು ನಿಲ್ಲಬೇಕು ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಹೇಳಿದರು.

ನಗರದ ಸಾಯಿ ಮಂದಿರ ರಸ್ತೆಯಲ್ಲಿರುವ ಹಾರಕೂಡಶ್ರೀ ಯಶಸ್ವಿ ಬಡಾವಣೆಯಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆ ಆರಂಭಿಸುತ್ತಿರುವ ವಿವಿಎನ್ ಟೆಕ್ನೊ ಸ್ಕೂಲ್ ನೂತನ ಕಟ್ಟಡದ ಭೂಮಿ ಪೂಜೆ ನೆರವೇರಿಸಿ, ಅವರು ಮಾತನಾಡಿದರು.

ಕೇವಲ ಹದಿನೈದು ವರ್ಷಗಳಲ್ಲಿ ವಿವೇಕಾನಂದ ವಿದ್ಯಾ ನಿಕೇತನ ಶಾಲೆ ಈ ಭಾಗದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಸರು ಮಾಡಿದೆ. ಈಗ ಪಿಯು ಕಾಲೇಜು ಹಾಗೂ ಟೆಕ್ನೊ ಸ್ಕೂಲ್ ಆರಂಭಿಸಲು ಮುಂದಾಗಿರುವುದು ಈ ಭಾಗದ ಮಕ್ಕಳಿಗೆ ಅನುಕೂಲವಾಗಲಿದೆ. ಈ ಸಂಸ್ಥೆಗೆ ತಮ್ಮ ಶಾಸಕರ ಅನುದಾನದಲ್ಲಿ ಕಟ್ಟಡದ ನಿರ್ವಹಣೆಗೆ ₹10 ಲಕ್ಷ ಮಂಜೂರು ಮಾಡುವುದಾಗಿ ಹೇಳಿದರು.

ವಿವೇಕಾನಂದ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷೆ ಸುವರ್ಣಾ ಭಗವತಿ, ಪ್ರಾಚಾರ್ಯ ಸಿದ್ದಪ್ಪ ಭಗವತಿ, ಪತ್ರಕರ್ತ ದೇವಯ್ಯ ಗುತ್ತೆದಾರ, ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಅಂಬಿಕಾ ರೆಡ್ಡಿ, ಶಾಲಾ ಸಿಬ್ಬಂದಿ ಹಾಗೂ ಪೋಷಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-34-1493931717

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.