ಕಲಬುರಗಿ: ನಗರದ ಬುದ್ಧ ವಿಹಾರದಲ್ಲಿ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಕೋಶದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಇತ್ತೀಚೆಗೆ ನಡೆಯಿತು.

ಮುಖ್ಯ ಅತಿಥಿಯಾಗಿದ್ದ ಗುಲಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ಪಿಎಸ್ಐ ಸಿದ್ದಪ್ಪ ಸೈದಾಪುರ ಮಾತನಾಡಿ, ‘ಶಿಬಿರಾರ್ಥಿಗಳು ಶಿಸ್ತು, ಸಮಯಪಾಲನೆ ಮತ್ತು ಕಠಿಣ ಪರಿಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉತ್ತಮ ಹುದ್ದೆಗಳನ್ನು ಪಡೆದು ಸಮಾಜಕ್ಕೆ ಮಾದರಿಯಾಗಬೇಕು’ ಎಂದರು.

ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ ಹಾಗೂ ಸದಸ್ಯ ವಿಜಯಕುಮಾರ ಕಟ್ಟಿಮನಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯೆ ಸವಿತಾ ತಿವಾರಿ ವಹಿಸಿದ್ದರು.

ವೇದಿಕೆಯಲ್ಲಿ ವಿಜಯಲಕ್ಷ್ಮಿ ಬಿರಾದಾರ, ವೈ.ಎಸ್. ವಗ್ಗಿ, ಕಲಾ ವಿಭಾಗದ ಡೀನ್ ವಿಜಯಕುಮಾರ ಸಾಲಿಮನಿ, ರಾಜಕುಮಾರ ಸಲಗರ, ಪರೀಕ್ಷಾ ನಿಯಂತ್ರಕ ಟಿ.ವಿ. ಅಡಿವೇಶ, ರವೀಂದ್ರಕುಮಾರ ಭಂಡಾರಿ, ಎನ್ಎಸ್ಎಸ್ ಅಧಿಕಾರಿಗಳಾದ ಶಿವಲಿಂಗಪ್ಪ ಪಾಟೀಲ, ಬಸಂತ ಸಾಗರ, ಮೀನಾಕ್ಷಿ ಹುಗ್ಗಿ, ಬಲಭೀಮ ಸಾಂಗ್ಲಿ ಹಾಗೂ ಶಿಬಿರಾಧಿಕಾರಿಗಳಾದ ಅಜ್ರಾ ಪರ್ವೀನ್, ರಾಜೇಶ ಅಜಬ್ ಸಿಂಗ್, ಸುಜಾತಾ ದೊಡ್ಡಮನಿ, ಪತ್ರಾಂಕಿತ ವ್ಯವಸ್ಥಾಪಕ ಅಜಯಸಿಂಗ್ ತಿವಾರಿ ಮತ್ತು ಬಿ. ವಿಜಯಲಕ್ಷ್ಮಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಸೌಂದರ್ಯ ಪ್ರಾರ್ಥನೆ ಸಲ್ಲಿಸಿದರು. ಶಿಬಿರಾರ್ಥಿಗಳು ಎನ್ಎಸ್ಎಸ್ ಗೀತೆ ಹಾಡಿದರು. ರವಿ ಬೌದ್ದೆ ಅತಿಥಿಗಳನ್ನು ಸ್ವಾಗತಿಸಿದರು. ಶಿವಲಿಂಗಪ್ಪ ಪಾಟೀಲ ಶಿಬಿರದ ವರದಿ ವಾಚಿಸಿದರು. ಬಸಂತ ಸಾಗರ ವಂದಿಸಿದರು. ಬಲಭೀಮ ಸಾಂಗ್ಲಿ ಕಾರ್ಯಕ್ರಮ ನಿರೂಪಿಸಿದರು.

250ಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-34-427132081

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.