ಕಲಬುರಗಿ: ನೇರ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರರು ನಡೆಸುತ್ತಿರುವ ಹೋರಾಟ ಮುಂದುವರಿದಿದೆ.

ಗುಲಬರ್ಗಾ ವಿಶ್ವವಿದ್ಯಾಲಯದ ಕಾರ್ಯಸೌಧದ ಮುಂಭಾಗದಲ್ಲಿ ನಡೆಯುತ್ತಿರುವ ಧರಣಿ ಸ್ಥಳಕ್ಕೆ ಬಿಜೆಪಿ ಮುಖಂಡ ಶಿವು ಅಷ್ಠಗಿ ಇತ್ತೀಚೆಗೆ ಭೇಟಿ ಸಮಸ್ಯೆ ಆಲಿಸಿದರು.

‘ಕಳೆದ ಹಲವು ವರ್ಷಗಳಿಂದ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸುತ್ತಿರುವ 281 ಹೊರಗುತ್ತಿಗೆ ಸಿಬ್ಬಂದಿಯನ್ನು ಏಪ್ರಿಲ್ 30ರಂದು ಏಕಾಏಕಿ ಸೇವೆಯಿಂದ ತೆಗೆದು ಹಾಕಿದ್ದು ಸರಿಯಲ್ಲ. ಇದು ವಿಶ್ವವಿದ್ಯಾಲಯ ಆಡಳಿತ ಮಂಡಳಿಯ ಈ ತುಘಲಕ್ ನಿರ್ಧಾರವು ಅವೈಜ್ಞಾನಿಕ ಮತ್ತು ಅಮಾನವೀಯವಾಗಿದೆ. ಇದರಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹಲವು ವರ್ಷಗಳಿಂದ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ನೌಕರರ ಬೇಡಿಕೆಗಳಿಗೆ ಮಾನವೀಯತೆ ಆಧಾರದಲ್ಲಿ ಸ್ಪಂದಿಸಬೇಕು. ನೌಕರರ ತಾಳ್ಮೆ ಪರೀಕ್ಷಿಸದೆ ಗಂಭೀರವಾಗಿ ಪರಿಗಣಿಸಿ ಸಮಸ್ಯೆ ಸರಿಪಡಿಸಬೇಕು’ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಯುವ ಮುಖಂಡರಾದ ಮಲ್ಲಿಕಾರ್ಜುನ ರಾಯಪ್ಪಗೌಡ, ನಿಜಗುಣ ಯಲಗೋಡ, ನೀಲಕಂಠ ಹಿರೇಮಠ ಹಾಗೂ ಹೊರಗುತ್ತಿಗೆ ನೌಕರರ ಸಂಘದ ವಿಜಯಕುಮಾರ್ ಕೆಂಗಲ್, ಶೀಲಪ್ರಕಾಶ ದೊಡ್ಮನಿ, ಸವಿತಾ ಮಹೇಶ್ವರಿ ಸೇರಿದಂತೆ ಪದಾಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-34-912897281

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.