ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಶಿಕಾಂತ ಎಸ್. ಉಡಿಕೇರಿ ಅವರಿಗೆ ಅನಾಮಧೇಯ ವ್ಯಕ್ತಿಗಳು ‘ಆ್ಯಸಿಡ್ ದಾಳಿ’ ನಡೆಸುವುದಾಗಿ ಜೀವ ಬೆದರಿಕೆ ಪತ್ರ ಬರೆದ ಪ್ರಕರಣ ಬೆಳಕಿಗೆ ಬಂದಿದೆ.

2024ರ ಬಿ.ಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ರಾಜ್ಯಪಾಲರು ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿದ್ದರು. ಸಮಿತಿಯ ಆದೇಶದಂತೆ ಮರು ಮೌಲ್ಯಮಾಪನ ಪ್ರಕ್ರಿಯೆ ನಡೆದಿದೆ.

‘ನಾವು ವಿದ್ಯಾರ್ಥಿಗಳಾಗಿದ್ದು, ₹2 ಲಕ್ಷ ನೀಡಿ ಪ್ರವೇಶ ಪಡೆದು 2 ವರ್ಷಗಳಿಂದ ಬಿ.ಇಡಿ ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ. ಸತ್ಯ ಶೋಧನ ಸಮಿತಿಯ ತೀರ್ಮಾನ, ಮರು ಮೌಲ್ಯಮಾಪನ ನಿರ್ಧಾರ ನಮಗೆ ಇಷ್ಟವಾಗಿಲ್ಲ. ಮರು ಮೌಲ್ಯಮಾಪನದಿಂದಾಗಿ ಫಲಿತಾಂಶದಲ್ಲಿ ಅಂಕಗಳು ಕಡಿಮೆಯಾದರೆ ಅಥವಾ ಅನುತ್ತೀರ್ಣವಾದರೆ ನಿಮ್ಮ ಮುಖಕ್ಕೆ ಆ್ಯಸಿಡ್ ಹಾಕಿ, ನರಳಿ–ನರಳಿ ಬದುಕುವಂತೆ ಮಾಡುತ್ತೇವೆ. ಇಂತಹ ಕೆಲಸ ಮಾಡಲು ನಾವು ಹೆದರುವುದಿಲ್ಲ’ ಎಂದು ಫೆಬ್ರುವರಿ 19ರಂದು ಬರೆದ ಅನಾಮಧೇಯ ಪತ್ರದಲ್ಲಿ ಬೆದರಿಕೆ ಹಾಕಲಾಗಿದೆ.

ಈ ಬಗ್ಗೆ ನಿತ್ಯವೂ ಆತಂಕ ಕಾಡುತ್ತಿದ್ದು, ಕಾನೂನು ಕ್ರಮಕೈಗೊಳ್ಳಬೇಕು ಎಂದು ಕುಲಪತಿ ಉಡಿಕೇರಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.

ಕೋರ್ಟ್ ನಿರ್ದೇಶನದಂತೆ ಮೇ 7ರಂದು ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-34-1613562999

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.