ಭಾಲ್ಕಿ: ಪಟ್ಟಣದ ಸತ್ಯನಿಕೇತನ ಶಿಕ್ಷಣ ಸಂಸ್ಥೆಗೆ ಸುಮಾರು ₹98 ಲಕ್ಷ ತೆರಿಗೆ ಪಾವತಿಸುವಂತೆ ಪುರಸಭೆ ಮುಖ್ಯಾಧಿಕಾರಿ ನೀಡಿದ್ದ ನೋಟಿಸ್ ಅನ್ನು ಕಲಬುರಗಿ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಸ್. ವಿಶ್ವಜೀತ ಶೆಟ್ಟಿ ರದ್ದುಪಡಿಸಿ ಮಹತ್ವದ ಆದೇಶ ನೀಡಿದ್ದಾರೆ.

ಪುರಸಭೆಯ ಮುಖ್ಯಾಧಿಕಾರಿ 2001 ರಿಂದ 2025 ರ ವರೆಗೆ ಸತ್ಯನಿಕೇತನ ಶಿಕ್ಷಣ ಸಂಸ್ಥೆಯ ಕಟ್ಟಡದ ಸುಮಾರು ₹98 ಲಕ್ಷ ಆಸ್ತಿ ತೆರಿಗೆ ಪಾವತಿಸುವಂತೆ ಆಸ್ತಿ ತೆರಿಗೆ ನೋಟಿಸ್ ನೀಡಿದ್ದರು. 30 ದಿನಗಳ ಒಳಗಡೆ ತೆರಿಗೆ ಪಾವತಿಸುವಂತೆ ಪುರಸಭೆ ಕಾಯ್ದೆ 105 (6) ರಂತೆ ಆದೇಶ ಮಾಡಿ ತಪ್ಪಿದ್ದಲ್ಲಿ ಪುರಸಭೆ ಕಾಯ್ದೆ ನಿಯಮ 143 ರಂತೆ ಆಸ್ತಿ ಜಪ್ತಿ ಮಾಡುವುದಾಗಿ ಆದೇಶ ಮಾಡಿದ್ದರು. ಸತ್ಯನಿಕೇತನ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಭಂಗೂರ ಪುರಸಭೆ ಮುಖ್ಯಾಧಿಕಾರಿಯ ನೋಟಿಸ್ ವಿರುದ್ಧ ಕಲಬುರಗಿ ಹೈಕೋರ್ಟ್ ಏಕ ಸದಸ್ಯತ್ವ ಪೀಠದ ಮೊರೆ ಹೋಗಿದ್ದರು.

ಕಲಬುರಗಿ ಉಚ್ಚ ನ್ಯಾಯಾಲಯವು ವಾದಿ ಮತ್ತು ಪ್ರತಿವಾದಿಗಳ ವಾದವನ್ನು ಆಲಿಸಿ ಶಿಕ್ಷಣ ಸಂಸ್ಥೆಗಳು ಕಟ್ಟಡಗಳನ್ನು ಶೈಕ್ಷಣಿಕ ಉದ್ದೇಶಗಳಿಗಾಗಿ ಬಳಸಲ್ಪಪಟ್ಟಿದಕ್ಕೆ ವಿದ್ಯಾದಾನ ಮಂದಿರಗಳಿಗೆ ಆಸ್ತಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ತೆರಿಗೆ ನೋಟಿಸ್ ಅನ್ನು ರದ್ದುಪಡಿಸಿದೆ ಎಂದು ಶಿಕ್ಷಣ ಸಂಸ್ಥೆಯ ಪರವಾಗಿ ವಾದ ಮಂಡಿಸಿದ ಕಲಬುರಗಿ ಹೈಕೋರ್ಟ್ ಹಿರಿಯ ವಕೀಲ ಜೈರಾಜ ಕೆ. ಬುಕ್ಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-33-382897130

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.