ಕಲಬುರಗಿ: ನಗರದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಜರುಗಿದ ಎರಡು ದಿನಗಳ ಜ್ಞಾನೋತ್ಸವ-2026 ತಾಂತ್ರಿಕ ಹಾಗೂ ಸಾಂಸ್ಕೃತಿಕ ಉತ್ಸವಕ್ಕೆ ಶನಿವಾರ ಸಂಜೆ ಅದ್ದೂರಿ ತೆರೆ ಬಿದ್ದಿತು.

ವಿವಿಯ ಆವರಣದಲ್ಲಿ ಜರುಗಿದ ಸಮಾರೋಪ ಸಮಾರಂಭದಲ್ಲಿ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ಬೀದರ್ನ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿಗೆ ಹಾಗೂ ರನ್ನರ್ ಅಪ್ ಸ್ಥಾನ ಪಡೆದಿರುವ ಕಲಬುರಗಿಯ ಪೂಜ್ಯ ದೊಡ್ಡಪ್ಪ ಎಂಜಿನಿಯರಿಂಗ್ ಕಾಲೇಜು ತಂಡಕ್ಕೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಹಾಗೂ ಜೆಸ್ಕಾಂ ನಿರ್ದೇಶಕ ಚಂದ್ರಕಾಂತ ಪಾಟೀಲ ಅವರು ಟ್ರೋಫಿ ವಿತರಿಸಿದರು.

ಇದಕ್ಕೂ ಮುನ್ನ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಸವರಾಜ ದೇಶಮುಖ ಮಾತನಾಡಿ, ‘ಈ ಉತ್ಸವದಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ವಿವಿಧ ಸ್ಪರ್ಧೆ, ಕಾರ್ಯಾಗಾರ ಮತ್ತು ಮನರಂಜನಾ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ ಮತ್ತು ಆತ್ಮವಿಶ್ವಾಸವನ್ನು ತುಂಬಿವೆ. ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಇದು ಮಹತ್ವದ ಪಾತ್ರವಹಿಸಿದೆ’ ಎಂದರು.

‘ಎಲ್ಲಾ ವಿದ್ಯಾರ್ಥಿಗಳು ತಮ್ಮ ಕೌಶಲವನ್ನು ಒಳ್ಳೆಯ ರೀತಿಯಿಂದ ತೋರಿಸಿದ್ದೀರಿ. ಲಿಂಗೈಕ್ಯ ಶರಣಬಸವಪ್ಪ ಅಪ್ಪ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಮುನ್ನಡೆಯೋಣ. ಮುಂದಿನ ವರ್ಷ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳು ತಮ್ಮ ಕೌಶಲವನ್ನು ಪ್ರದರ್ಶಿಸಬೇಕು’ ಎಂದು ಕರೆ ನೀಡಿದರು.

ಜೆಸ್ಕಾಂ ನಿರ್ದೇಶಕ ಚಂದ್ರಕಾಂತ ಪಾಟೀಲ ಮಾತನಾಡಿ, ‘ಶರಣಬಸವ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿರುವುದು ವಿದ್ಯಾರ್ಥಿಗಳ ಸೌಭಾಗ್ಯ. ಇಲ್ಲಿ ಅಧ್ಯಯನದೊಂದಿಗೆ ಮಾನವೀಯ ಮೌಲ್ಯಗಳನ್ನು ಕಲಿಯುತ್ತೀರಿ’ ಎಂದು ಹೇಳಿದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ, ಕುಲಸಚಿವೆ ಲಕ್ಷ್ಮೀ ಪಾಟೀಲ ಮಾಕಾ, ಕುಲಸಚಿವ (ಮೌಲ್ಯಮಾಪನ) ಎಸ್.ಎಚ್. ಹೊನ್ನಳ್ಳಿ, ಹಣಕಾಸು ಅಧಿಕಾರಿ ಕಿರಣ ಮಾಕಾ, ಸಂಶೋಧನಾ ಡೀನ್ ಸುಜಾತಾ ಮಲ್ಲಾಪುರ ಉಪಸ್ಥಿತರಿದ್ದರು. ಶಿವಕುಮಾರ ಜವಳಿಗಿ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-33-1663136377

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.