ಕಲಬುರಗಿ: ನಗರದಲ್ಲಿ ಭಾನುವಾರ ನಡೆದ ನೀಟ್ ಪರೀಕ್ಷೆಯಲ್ಲಿ ಪರೀಕ್ಷಾ ಕೇಂದ್ರದ ಸಿಬ್ಬಂದಿಯ ಎಡವಟ್ಟಿನಿಂದ ಅಂಗವಿಕಲ ಅಭ್ಯರ್ಥಿಯೊಬ್ಬರು ಪರದಾಡಿದ್ದಾರೆ.

ಕೇಂದ್ರ ಸರ್ಕಾರದ ಎನ್ಟಿಎ ಏಜೆನ್ಸಿಯು ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ನಗರದ 20 ಕೇಂದ್ರಗಳಲ್ಲಿ ಭಾನುವಾರ ನೀಟ್ ಪರೀಕ್ಷೆ ಏರ್ಪಡಿಸಿತ್ತು. ನಗರದ ನ್ಯಾಷನಲ್ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಕೈ–ಕಾಲಿನ ಬೆರಳುಗಳ ಅಂಗವೈಕಲ್ಯ ಹೊಂದರುವ ಅಭ್ಯರ್ಥಿಯೊಬ್ಬರು ಪರೀಕ್ಷೆ ಎದುರಿಸುತ್ತಿದ್ದರು.

‘ನಿಯಮದ ಪ್ರಕಾರ ಅಂಗವೈಕಲ್ಯ ಇರುವ ಅಭ್ಯರ್ಥಿಗಳಿಗೆ ಒಂದು ಗಂಟೆ ಹೆಚ್ಚುವರಿ ಸಮಯ ಕೊಡಬೇಕು. ಪರೀಕ್ಷೆ ಆರಂಭಕ್ಕೂ ಮುನ್ನ ಎಲ್ಲ ದಾಖಲಾತಿಗಳನ್ನು ಪರಿಶೀಲಿಸಿ ಹೆಚ್ಚುವರಿ ಸಮಯ ನೀಡುವುದಾಗಿ ಹೇಳಿದ್ದರು. ಆದರೆ, ಪರೀಕ್ಷಾ ಸಮಯ ಮುಗಿದಾಗ ಸಾಮಾನ್ಯ ವಿದ್ಯಾರ್ಥಿಗಳೊಂದಿಗೆ ನನ್ನ ಪೇಪರ್ ಕೂಡ ಇಸಿದುಕೊಂಡರು. ಇದರಿಂದ ನನಗೆ ಗೊಂದಲವಾಯಿತು. ಈ ಕುರಿತು ಪ್ರಶ್ನಿಸಿದೆ. ಬಳಿಕ ಏನೇನೋ ಸಮಾಲೋಚಿಸಿ 15 ನಿಮಿಷ ಸಮಯ ಹಾಳು ಮಾಡಿದರು. ಬಳಿಕ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಿದರು. ನನ್ನಂತೆಯೇ ಮತ್ತೊಬ್ಬ ಅಂಗವಿಕಲ ಅಭ್ಯರ್ಥಿ ಇದ್ದರೂ ಅವರಿಗೆ ಯಾವುದೇ ತೊಂದರೆ ಮಾಡಲಿಲ್ಲ. ನನಗೆ ಮಾತ್ರವೇ ಈ ರೀತಿ ಆಗಿದ್ದರಿಂದ ಪರೀಕ್ಷೆ ಎದುರಿಸಲು ಪರದಾಡಬೇಕಾಯಿತು’ ಎಂದು ಹೆಸರು ಬಹಿರಂಗ ಪಡಿಸಲು ಇಚ್ಛಿಸದ ಅಂಗವಿಕಲ ಅಭ್ಯರ್ಥಿಯೊಬ್ಬರು ಅಳಲು ತೋಡಿಕೊಂಡರು.

‘ಕಲಬುರಗಿಯ 20 ಕೇಂದ್ರಗಳಲ್ಲಿ ಮಧ್ಯಾಹ್ನ 2ರಿಂದ 5 ಗಂಟೆ ವರೆಗೆ ನೀಟ್ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ಒಟ್ಟು 8,112 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಆ ಪೈಕಿ 7,768 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾದರು. 344 ವಿದ್ಯಾರ್ಥಿಗಳು ಗೈರಾಗಿದ್ದರು. ಅಂಗವಿಕಲ ಅಭ್ಯರ್ಥಿಗೆ ತೊಂದರೆಯಾದ ಮಾಹಿತಿ ಸಿಕ್ಕಿಲ್ಲ’ ಎಂದು ನೀಟ್ ಪರೀಕ್ಷೆಯ ಉಸ್ತುವಾರಿ ವಹಿಸಿದ್ದ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-34-1400870452

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.