ಕಲಬುರಗಿ: ಕೇಂದ್ರ ಸರ್ಕಾರದ ಎನ್ಟಿಎ ಏಜೆನ್ಸಿಯು ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ಮೇ 3ರಂದು ನಗರದ 20 ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆಸಲಿದೆ. ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು ಮಾತನಾಡಿದರು.

‘ಅಂದು ಮಧ್ಯಾಹ್ನ 2ರಿಂದ 5 ಗಂಟೆ ವರೆಗೆ ಪರೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲಿ ಸುಮಾರು 8,100 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿ ಕೊಂಡಿದ್ದಾರೆ. ಪರೀಕ್ಷೆಗೆ ಬಿಗಿ ಭದ್ರತೆ ಕಲ್ಪಿಸಬೇಕು. ಎಲ್ಲಿಯೂ ನಕಲು ಮಾಡಲು ಅವಕಾಶ ನೀಡಬಾರದು. ಪರೀಕ್ಷೆ ಸುಸೂತ್ರ, ನ್ಯಾಯಸಮ್ಮತ ಮತ್ತು ಶಾಂತಿಯುತವಾಗಿ ನಡೆಯಲು ಪ್ರತಿ ಕೇಂದ್ರಕ್ಕೆ ಸಿಸಿಟಿವಿ ನಿಗಾ ಇರಲಿದೆ’ ಎಂದರು.

ಪ್ರತಿ ಕೇಂದ್ರಕ್ಕೆ ಒಬ್ಬ ಜಿಲ್ಲಾಮಟ್ಟದ ಅಧಿಕಾರಿಗಳನ್ನು ಕೇಂದ್ರದ ವೀಕ್ಷಕರನ್ನಾಗಿ ನೇಮಿಸಿದ್ದು, ಅರ್ಧ ಗಂಟೆ ಮುಂಚೆಯೆ ವೀಕ್ಷಕರು ಕೇಂದ್ರದಲ್ಲಿ ಹಾಜರಾಗಿ ಪಾರದರ್ಶಕವಾಗಿ ಪರೀಕ್ಷೆ ನಡೆಯುವಂತೆ ಮೇಲುಸ್ತುವಾರಿ ವಹಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಮಾತನಾಡಿ, ‘ಬೇಸಿಗೆ ಹೆಚ್ಚಿಗೆ ಇರುವುದರಿಂದ ಕುಡಿಯುವ ನೀರು, ಒಆರ್ಎಸ್ ಪರೀಕ್ಷಾ ಕೇಂದ್ರಗಳಲ್ಲಿ ಇಡಲು ವ್ಯವಸ್ಥೆ ಮಾಡಬೇಕು. ಪರೀಕ್ಷೆ ದಿನದ ಮುನ್ನವೇ ಕೇಂದ್ರದಲ್ಲಿ ಆಸನ ವ್ಯವಸ್ಥೆ, ವಿದ್ಯುತ್, ಶೌಚಾಲಯದಂತಹ ಮೂಲಸೌಕರ್ಯ ಇರುವುದನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಖಾತ್ರಿ ಪಡಿಸಿಕೊಳ್ಳಬೇಕು. ಪ್ರವೇಶ ದ್ವಾರದಲ್ಲಿಯೆ ಪೊಲೀಸ್ ಸಿಬ್ಬಂದಿ ಸಹಾಯ ಪಡೆದು ಅಭ್ಯರ್ಥಿಗಳಿಗೆ ಫ್ರಿಸ್ಕಿಂಗ್ ಮಾಡಬೇಕು. ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆ ಐ.ಡಿ ಕಾರ್ಡ್ ತರುವುದನ್ನು ಮರೆಯಬಾರದು’ ಎಂದರು.

ಸಭೆಯಲ್ಲಿ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಇತರೆ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-34-499890205

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.