ಕಲಬುರಗಿ: ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಗೆ ಕಾರಣರಾದ ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೆ ಸಲ್ಲಿಸಿದರು.

ಬಳಿಕ ಪರಿಷತ್ನ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ, ‘ಕೆಲವು ವರ್ಷಗಳಿಂದ ನೀಟ್ ಪರೀಕ್ಷೆಯ ಸುತ್ತ ಒಂದಿಲ್ಲೊಂದು ಅಕ್ರಮಗಳು ಕೇಳಿಬರುತ್ತಿದ್ದು, ಪ್ರಶ್ನೆಪತ್ರಿಕೆ ಸೋರಿಕೆಯು ವ್ಯವಸ್ಥಿತ ಜಾಲವಾಗಿ ಮಾರ್ಪಟ್ಟಿರುವುದು ದುರದೃಷ್ಟಕರ. ಪರೀಕ್ಷೆ ನಡೆದ ಪ್ರತಿ ಬಾರಿಯೂ ಪತ್ರಿಕೆ ಸೋರಿಕೆ ವರದಿಗಳು ಬರುತ್ತಿರುವುದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವಂತೆ ಮಾಡಿದೆ. ಈ ಸಾಲು ಸಾಲು ಲೋಪದೋಷಗಳ ಬಗ್ಗೆ ಉನ್ನತ ಮಟ್ಟದ ನ್ಯಾಯಾಂಗ ತನಿಖೆಯಾಗಬೇಕು’ ಎಂದು ಆಗ್ರಹಿಸಿದ್ದಾರೆ.

‘ದೇಶಕ್ಕೆ ವೈದ್ಯರನ್ನು ನೀಡುವ ಪವಿತ್ರ ಪರೀಕ್ಷೆಯಲ್ಲಿ ಭ್ರಷ್ಟಾಚಾರ ನುಸುಳಿರುವುದು ದೇಶದ ಆರೋಗ್ಯ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ. ಈ ಬಗ್ಗೆ ಸರ್ಕಾರ ಶೀಘ್ರವೇ ಕಠಿಣ ಕಾನೂನು ರೂಪಿಸಬೇಕು’ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪರಿಷತ್ ನಗರ ಘಟಕದ ಅಧ್ಯಕ್ಷ ಸಚಿನ್, ಮುಖಂಡರಾದ ವೈ.ಎಸ್. ಸಿಂದಗೇರಿ, ವಿದ್ಯಾರ್ಥಿಗಳಾದ ಆದಿತ್ಯ ಗುಬ್ಬೆವಾಡ, ಮಹಮದ್ ಅಸ್ಲಮ್, ಬುರಮ್ಮ, ಚನ್ನು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-34-1447241024

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.