ಕಲಬುರಗಿ: ‘ಎನ್ಎಸ್ಎಸ್ ಶಿಬಿರದಿಂದ ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆ, ನಾಯಕತ್ವ ಗುಣಗಳು, ಶಿಸ್ತು ಮತ್ತು ವ್ಯಕ್ವಿತ್ವ ವಿಕಸನವಾಗುತ್ತದೆ’ ಎಂದು ಪ್ರಾಚಾರ್ಯ ಸುರೇಶಕುಮಾರ ನಂದಗಾಂವ ಹೇಳಿದರು.

ನಗರದ ಶರಣಬಸವೇಶ್ವರ ಕಲಾ ಪದವಿ ಮಹಾವಿದ್ಯಾಲಯ ಮತ್ತು ಗುಲಬರ್ಗಾ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಒಂದು ವಾರ ನಡೆಯಲಿರುವ 2025–26ನೇ ಶೈಕ್ಷಣಿಕ ಸಾಲಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ನನಗಾಗಿ ಅಲ್ಲ ನಿಮಗಾಗಿ’ ಎಂಬುವುದು ಶಿಬಿರದ ಮುಖ್ಯ ಧ್ಯೇಯ. ಈ ಯೋಜನೆ ಮಹಾತ್ಮ ಗಾಂಧೀಜಿ ಅವರ ಕನಸಿನ ಕೂಸು. ಸ್ವಚ್ಛತೆ, ಆರೋಗ್ಯ ಜಾಗೃತಿ, ಪರಿಸರ ಸಂರಕ್ಷಣೆ ಬಗ್ಗೆ ತಿಳಿಯುವುದು. ಗ್ರಾಮೀಣ ಜೀವನ ಅರಿತುಕೊಳ್ಳಲು ಸಾಧ್ಯವಾಗುತ್ತದೆ. ಶಿಬಿರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಉಪಯೋಗ ಪಡೆದುಕೊಳ್ಳಬೇಕು’ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಸಂಸ್ಥೆಯ ಪರಮೇಶ್ವರಿ ಪ್ರಭುರಾಜ ಅಪ್ಪ ಶಿಬಿರ ಉದ್ಘಾಟಿಸಿದರು. ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶರಣಗೌಡ ಪಾಟೀಲ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅನಿಲ್ ಭರಣಿ ಮಾತನಾಡಿದರು.

ಮಹಾವಿದ್ಯಾಲಯದ ಎನ್ಎಸ್ಎಸ್ ಸಂಯೋಜನಾಧಿಕಾರಿ ವಿಜಯಲಕ್ಷ್ಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುವರ್ಣ ನಿರೂಪಿಸಿದರು. ಪ್ರಾಧ್ಯಾಪಕ ಲಕ್ಷ್ಮಿಪುತ್ರ ವಂದಿಸಿದರು. ಸಹ ಸಂಯೊಜಕ ಪ್ರೊ.ಅನಿತಾ ಗೊಬ್ಬುರ, ಮಿಲಿಂದಕುಮಾರ ಸುಳ್ಳದ, ಪ್ರಾಧ್ಯಾಪಕಿ ಆರತಿ, ಶಿಬಿರಾರ್ಥಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-34-894892403

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.