ಕಲಬುರಗಿ: ‘ಎನ್ಎಸ್ಎಸ್ ಎಂದರೆ ನಾನು ಸೇವೆಗೆ ಸದಾ ಸಿದ್ಧ ಎಂದರ್ಥ. ಶಿಬಿರದಲ್ಲಿ ಭಾಗವಹಿಸುವವರು ಸೇವೆಗೆ ಸದಾ ಸಿದ್ಧರಾಗಿರಬೇಕು’ ಎಂದು ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಸಮಾಜಶಾಸ್ತ ವಿಭಾಗದ ಮುಖ್ಯಸ್ಥ ಮಹೇಶಕುಮಾರ ಗಂವ್ಹಾರ ಹೇಳಿದರು.

ನಗರದ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ನಡೆದ ಎನ್ಎಸ್ಎಸ್ ವಿಶೇಷ ವಾರ್ಷಿಕ ಶಿಬಿರದಲ್ಲಿ ಮಾತನಾಡಿ,‘ನಿಸ್ವಾರ್ಥ ಸೇವೆಗೆ ಮತ್ತೊಂದು ಹೆಸರು ಎನ್ಎಸ್ಎಸ್’ ಎಂದರು.

ಮಹಾವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪುಟ್ಟಮಣಿ ದೇವಿದಾಸ ಮಾತನಾಡಿ,‘ಗ್ರಾಮ ಸ್ವರಾಜ್ ಗಾಂಧೀಜಿ ಕನಸಾಗಿತ್ತು. ಎನ್ಎಸ್ಎಸ್ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯೆ ಸೀಮಾ ಪಾಟೀಲ ಮಾತನಾಡಿದರು. ಎನ್ಎಸ್ಎಸ್ ಅಧಿಕಾರಿ ರಾಜಲಕ್ಷ್ಮಿ ಡಿ. ಸ್ವಾಗತಿಸಿದರು. ಕಲ್ಪನಾ ಡಿ.ಮಹೇಂದ್ರಕರ್ ಅತಿಥಿ ಪರಿಚಯ ಮಾಡಿದರು. ಲಕ್ಷ್ಮಿ ಎಚ್. ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-34-1471459595

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.