ಕಲಬುರಗಿ: ‘ಬಿಸಿಲ ಬೇಗೆಯಲ್ಲಿ ಬದುಕು ಕಟ್ಟಿಕೊಂಡವರ ನೋವಿಗೆ ಸ್ಪಂದಿಸಿದ ‘ಬಿಸಿ ಉಸಿರು ಕಾವ್ಯ ನೀರು’ ಕವಿಮನವು ಜಾಗೃತಿಯ ದೀಪ ಹಚ್ಚಿದೆ’ ಎಂದು ಆಕಾಶವಾಣಿ ನಿವೃತ್ತ ಕಾರ್ಯಕ್ರಮ ನಿರ್ವಾಹಕ ಸದಾನಂದ ಪೆರ್ಲ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕನ್ನಡ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ಬಿಸಿ ಉಸಿರು ಕಾವ್ಯ ನೀರು’ ವಿಶೇಷ ಜಾಗೃತಿ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಇಂದಿನ ಕವಿಗೋಷ್ಠಿ ಬಿಸಿಲ ಧಗೆಗೆ ಕಾವ್ಯದ ಝರಿಯಿಂದ ತಂಪೆರದಿದೆ. ತಾಪಮಾನ ಏರಿಕೆ, ಅದರಿಂದ ಪರಿಸರಕ್ಕೆ ಉಂಟಾಗುವ ಹಾನಿ, ನವ ನಾಗರಿಕತೆ ಮತ್ತು ಅಭಿವೃದ್ಧಿಯ ಹೆಸರಿನಲ್ಲಿ ಪ್ರಕೃತಿಯ ಮೇಲಿನ ಶೋಷಣೆಗೆ ಕವಿಗಳು ತಮ್ಮ ಭಾವನೆಗಳ ಮೂಲಕ ಕಾವ್ಯ ಕಟ್ಟಿಕೊಟ್ಟ ಬಗೆ ಅತ್ಯಂತ ವಿಶಿಷ್ಟ’ ಎಂದರು.

ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ‘ಇಂದು ಮಿತಿ ಮೀರಿದ ಬಿಸಿಲಿನಿಂದ ರಕ್ಷಿಸಿಕೊಳ್ಳಲು ನಾವುಗಳು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿಶಿಷ್ಟ ಶೈಲಿಯ ಕಾವ್ಯದ ಮೂಲಕ ಸಾಮಾಜಿಕ ಜಾಗೃತಿ ಮೂಡಿಸುವ ಪ್ರಯತ್ನ ಪರಿಷತ್ತು ಮಾಡಿದೆ’ ಎಂದು ಹೇಳಿದರು.

ಕವಿಗಳು ಕವನ ವಾಚನ ಮಾಡಿದರು. ವೈದ್ಯಾಧಿಕಾರಿ ಡಾ.ಸಂಧ್ಯಾ ಕಾನೇಕರ್, ಹೋರಾಟಗಾರ ಮಂಜುನಾಥ ನಾಲವಾರಕರ್, ವಕೀಲೆ ಪೂರ್ಣಿಮಾ ಜಾನೆ, ಜಿಲ್ಲಾ ಕಸಾಪ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್.ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಪ್ರಮುಖರಾದ ಧರ್ಮರಾಜ ಜವಳಿ, ಸೈಯ್ಯದ್ ನಜಿರುದ್ದೀನ್ ಮುತವಲ್ಲಿ, ದಿನೇಶ ಮದಕರಿ, ರಾಜೇಂದ್ರ ಮಾಡಬೂಳ, ಶಿವಲೀಲಾ ಕಲಗುರ್ಕಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-34-229664861

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.