ಆಳಂದ: ‘ಶೈಕ್ಷಣಿಕ ಅಂಕ ಗಳಿಕೆಗೆ ಸೀಮಿತರಾಗದೇ ತಮ್ಮ ಕನಸುಗಳು ಸಾಕಾರಗೊಳಿಸಲು ಕಠಿಣ ಪರಿಶ್ರಮದಿಂದ ಪ್ರಯತ್ನಸಿದರೆ ಯಶಸ್ಸು ಪಡೆಯಲು ಸಾಧ್ಯವಿದೆ’ ಎಂದು ಕಲಬುರಗಿ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಢಗೆ ತಿಳಿಸಿದರು.

ಪಟ್ಟಣದ ವಿವೇಕ ವರ್ಧಿನಿ ಪಬ್ಲಿಕ್ ಶಾಲೆ ಆವರಣದಲ್ಲಿ ಶುಕ್ರವಾರ ಆಳಂದ ಸೈನಿಕರ ಅಭಿವೃದ್ಧಿ ಸಂಘ ಹಾಗೂ ಸಮತಾ ಲೋಕ ಶಿಕ್ಷಣ ಸಮಿತಿಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಸೇನಾ ಪೂರ್ವ ಉಚಿತ ತರಬೇತಿಯ ಸಮಾರೋಪ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಾಸಕ ಬಿ.ಆರ್.ಪಾಟೀಲ ಮಾತನಾಡಿ, ‘ಸೇನಾ ಪೂರ್ವ ತರಬೇತಿಯಲ್ಲಿ ಪಡೆದ ಅನುಭವ, ಅಭ್ಯಾಸಗಳು ಮುಂದುವರಿಸಿಕೊಂಡು ಹೋದರೆ ಸಾಧನೆ ಮಾಡಲು ಪ್ರೇರಣೆಯಾಗಲಿದೆ’ ಎಂದು ಹೇಳಿದರು.

‘ಸಮತಾ ಲೋಕ ಶಿಕ್ಷಣ ಸಮಿತಿಯ ಸಹಕಾರದಿಂದ ಕಳೆದ 3 ವರ್ಷದಿಂದ ಉಚಿತ ತರಬೇತಿ ನೀಡಲಾಗುತ್ತಿದೆ. ಐನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಬೇತಿ ಪಡೆದಿದ್ದು, ಹಲವರು ಭಾರತೀಯ ಸೇನೆಗೆ ಸೇರ್ಪಡೆಯಾಗಿದ್ದಾರೆ’ ಎಂದು ಆಳಂದ ಸೈನಿಕ ಅಭಿವೃದ್ಧಿ ಸಂಘದ ಅಧ್ಯಕ್ಷ ಸಿದ್ದಲಿಂಗ ಮಲಶೆಟ್ಟಿ ಹೇಳಿದರು.

ಮಾದನ ಹಿಪ್ಪರಗಿಯ ಅಭಿನವ ಶಿವಲಿಂಗ ಸ್ವಾಮೀಜಿ, ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಆರ್.ಕೆ.ಪಾಟೀಲ ಮಾತನಾಡಿದರು. ಪ್ರಶಿಕ್ಷಣಾರ್ಥಿಗಳು ತರಬೇತಿ ಕುರಿತು ಅನಿಸಿಕೆ ಹಂಚಿಕೊಂಡರು. ಮಾಜಿ ಸೈನಿಕರ ಸಂಘದ ಅಧ್ಯಕ್ಷ ಸಿದ್ದಲಿಂಗ ಮಲಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಡಿವೈಎಸ್ಪಿ ತಮ್ಮರಾಯ ಪಾಟೀಲ, ಸಂಘದ ಉಪಾಧ್ಯಕ್ಷ ರಾಜು ಸಿಂಗೆ, ಮಾಣಿಕರಾವ ಬಿರಾದಾರ, ಹಣಮಂತ ಪಾತಾಳೆ, ಉಲ್ಲಾಸ ಸಿಂಗೆ, ಸಿದ್ದರಾಮ ವಡಗಾಂವ, ನಿಂಗಣ್ಣ ದೊಡ್ಡಮನಿ, ಸಿದ್ದಾರ್ಥ ಹಸೂರೆ, ಪರಮೇಶ್ವರ ಕಮನಹಳ್ಳಿ, ಸಲ್ಮಾನ್ ನಗರ್, ಕೃಷ್ಣಾ ಲಗುದೆ, ಚನ್ನವೀರ ಭಕರೆ ಇದ್ದರು. ಪ್ರಮೋದ ಪಂಚಾಳ ನಿರೂಪಿಸಿದರು. ಸಿದ್ದಾರ್ಥ ಹಸೂರೆ ಸ್ವಾಗತಿಸಿದರು. ಸತೀಶ ಸನ್ಮುಖ ವಂದಿಸಿದರು.

ತರಬೇತಿಯ ವಿವಿಧ ಚಟುವಟಿಕೆಗಳಲ್ಲಿ ಉತ್ತಮ ಸಾಮರ್ಥ್ಯ ತೋರಿದ ವಿದ್ಯಾರ್ಥಿಗಳಿಗೆ ಪದಕ ಮತ್ತು ಪ್ರಶಸ್ತಿಪತ್ರ ನೀಡಿ ಸತ್ಕರಿಸಲಾಯಿತು. ಜಿಲ್ಲೆಯ ವಿವಿಧೆಡೆಯಿಂದ ವಿದ್ಯಾರ್ಥಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು. ನಂತರ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ಜರುಗಿದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-31-1871397032

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.