ಕಲಬುರಗಿ: ‘ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಛಲ ಇದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯ’ ಎಂದು ಅಂತರರಾಷ್ಟ್ರೀಯ ಕೊಕ್ಕೊ ಕ್ರೀಡಾಪಟು ಚೈತ್ರಾ ಬಿ. ಹೇಳಿದರು.

ನಗರದ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ಶರಣಬಸವೇಶ್ವರ ಕಲಾ ಮಹಾವಿದ್ಯಾಲಯವು ಶನಿವಾರ ಹಮ್ಮಿಕೊಂಡಿದ್ದ ಕಲಾ ಅಕಾಡೆಮಿ ಸಮಾರೋಪ ಮತ್ತು ಬಿಎ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

‘ಶಿಕ್ಷಣವು ವಿದ್ಯಾರ್ಥಿಗಳ ಜೀವನದಲ್ಲಿ ಜ್ಞಾನ ಮಾತ್ರವಲ್ಲ, ಉತ್ತಮ ವ್ಯಕ್ತಿತ್ವ, ಶಿಸ್ತು, ನೈತಿಕ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿ ಬೆಳೆಸುವ ಶಕ್ತಿಯಾಗಿದೆ. ಕಠಿಣ ಪರಿಶ್ರಮ, ಆತ್ಮವಿಶ್ವಾಸ ಮತ್ತು ನಿರಂತರ ಕಲಿಕೆಯ ಮನೋಭಾವ ಅಗತ್ಯವಿದೆ’ ಎಂದರು.

‘6ನೇ ತರಗತಿಯಲ್ಲಿರುವಾಗಲೇ ಕೊಕ್ಕೊ ಆಟದಲ್ಲಿ ನಿರಂತರ ಪಯತ್ನ ಪಟ್ಟು ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿಗಳು ಲಭಿಸಿದವು. 2025ರಲ್ಲಿ ಕೊಕ್ಕೊ ವಿಶ್ವಕಪ್ ಪಡೆಯುವಲ್ಲಿ ಪ್ರಮುಖ ಪಾತ್ರವಹಿಸಿದ್ದೇನೆ’ ಎಂದು ತಿಳಿಸಿದರು.

ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ದಶರಥ ಮೇತ್ರೆ ಮಾತನಾಡಿ, ‘ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಗುರಿಯಿಂದ ವಿಚಲಿತರಾಗಬಾರದು’ ಎಂದು ಕಿವಿಮಾತು ಹೇಳಿದರು.

ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ರಾಮಕೃಷ್ಣ ರಡ್ಡಿ ಮಾತನಾಡಿ, ‘ಉನ್ನತ ಶಿಕ್ಷಣ, ಉದ್ಯೋಗ, ಉದ್ಯಮ ಅಥವಾ ಯಾವುದೇ ಕ್ಷೇತ್ರವನ್ನು ಆಯ್ಕೆ ಮಾಡಿದರೂ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು’ ಎಂದರು.

ಮಹಾವಿದ್ಯಾಲಯದ ಪ್ರಾಚಾರ್ಯ ಸುರೇಶಕುಮಾರ ನಂದಗಾಂವ ಅಧ್ಯಕ್ಷತೆ ವಹಿಸಿದ್ದರು. ವಿವಿಧ ವಿಭಾಗದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸಂಗೀತ ವಿಭಾಗದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಪ್ರಾಧ್ಯಾಪಕ ಲಕ್ಷ್ಮಿಪುತ್ರ ಸ್ವಾಗತಿಸಿದರು. ಅನಿತಾ ಗೊಬ್ಬುರ್, ಹೆಬ್ಜಿಬಾ ನಿರೂಪಿಸಿದರು. ಆರತಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-34-644347101

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.