ಕಲಬುರಗಿ: ನಗರದ ಪಿ.ಜಿ. ಬಿಲ್ಡಿಂಗ್ ಸಭಾಂಗಣದಲ್ಲಿ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಕಾರ್ಯಕ್ರಮ ಹಾಗೂ ವಿವಿಧ ಘಟಕಗಳ ಸಮಾರೋಪ ಸಮಾರಂಭವನ್ನು ಶಾಸಕ ಅಲ್ಲಮಪ್ರಭು ಪಾಟೀಲ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಮಹಾವಿದ್ಯಾಲಯದ ವಿದ್ಯಾರ್ಥಿಗಳ ಅಭಿವೃದ್ಧಿಗೆ ಸದಾ ಸಿದ್ಧನಿದ್ದೇನೆ ಮತ್ತು ವಿದ್ಯಾರ್ಥಿಗಳು ಕಷ್ಟ ಪಟ್ಟು ಅಧ್ಯಯನ ಮಾಡಿ ಜೀವನದಲ್ಲಿ ಮುಂದೆ ಬರಬೇಕು’ ಎಂದರು.

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಎಂ. ಭಾಸ್ಕರ್ ಮಾತನಾಡಿ, ‘ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಭವಿಷ್ಯದ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು. ಶಿಕ್ಷಣವು ವ್ಯಕ್ತಿತ್ವ ವಿಕಾಸಕ್ಕೆ ಪೂರಕವಾಗಿದ್ದು, ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳುವುದು ಅಗತ್ಯ’ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಮಹಾವಿದ್ಯಾಲಯ (ಸ್ವಾಯತ್ತ)ದ ಪ್ರಾಂಶುಪಾಲರಾದ ಪ್ರೊ. ಸವಿತಾ ತಿವಾರಿ ವಹಿಸಿ, ಅಂತಿಮ ವರ್ಷದ ವಿದ್ಯಾರ್ಥಿಗಳ ಮುಂದಿನ ಜೀವನ ಪಯಣ ಯಶಸ್ವಿಯಾಗಲಿ’ ಎಂದು ಹಾರೈಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಚಂದ್ರಿಕಾ ಪರಮೇಶ್ವರ, ವಿಜಯಕುಮಾರ ಕಟ್ಟಿಮನಿ, ಪ್ರಾಧ್ಯಾಪಕರಾದ ಟಿ.ವಿ.ಅಡಿವೇಶ, ಮಲ್ಲೇಶಪ್ಪ ಎಸ್. ಕುಂಬಾರ, ವಿಜಯಕುಮಾರ ಸಾಲಿಮನಿ, ರಾಜಕುಮಾರ ಸಲಗರ, ದವಲಪ್ಪ ಬಿ.ಎಚ್, ರವೀಂದ್ರಕುಮಾರ ಭಂಡಾರಿ, ಲಕ್ಷ್ಮಣ ಭೋಸ್ಲೆ, ಶ್ರೀಮಂತ ಹೋಳ್ಳರ್, ಬಸಂತ ಸಾಗರ, ಅಜಯಸಿಂಗ್ ತಿವಾರಿ, ವಿಜಯಲಕ್ಷ್ಮಿ ಬಿ, ಶಿವಾನಂದ ಸ್ವಾಮಿ, ಬಲಭೀಮ ಸಾಂಗ್ಲಿ, ರಮೇಶ ಪೋತೆ, ಬೆಣ್ಣೂರ ವಿಶ್ವನಾಥ, ಶಿವಲಿಂಗಪ್ಪ ಪಾಟೀಲ, ಮೀನಾಕ್ಷಿ ಹುಗ್ಗಿ, ರವಿ ಬೌದ್ದೆ, ಶಂಕರ ರಾಠೋಡ, ನಶೀಮ್ ಫಾತಿಮಾ, ಶ್ರೀದೇವಿ ರಾಠೋಡ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-34-43858296

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.