ಕಲಬುರಗಿ: ‘ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮಗಳಿಂದ ದೂರವಿದ್ದು, ಪ್ರತಿದಿನ ದಿನಪತ್ರಿಕೆಗಳನ್ನು ಓದಬೇಕು’ ಎಂದು ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕ ಸಂತೋಷ ಹುಂಪ್ಲಿ ಸಲಹೆ ನೀಡಿದರು.

ನಗರದ ಜೇವರ್ಗಿ ರಸ್ತೆಯಲ್ಲಿರುವ ಅಕ್ಕಮಹಾದೇವಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಭಾರತೀಯ ಚುನಾವಣಾ ಸುಧಾರಣಾ ಹೋರಾಟ ಸಮಿತಿಯ ಸಹಯೋಗದಲ್ಲಿ ನಡೆದ ‘ಚುನಾವಣೆಗಳಲ್ಲಿ ಹಣಬಲ ನಿಯಂತ್ರಿಸಿ-ಪ್ರಜಾಪ್ರಭುತ್ವ ಉಳಿಸಿ’ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

‘ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ಭಾಗಿಯಾಗುವುದರಿಂದ ವ್ಯಕ್ತಿತ್ವ ವಿಕಸನ, ಸಾಮಾಜಿಕ ಪ್ರಜ್ಞೆ ಮತ್ತು ನಾಯಕತ್ವದ ಗುಣ ಬೆಳೆಯುತ್ತದೆ’ ಎಂದರು.

ಕಾಲೇಜಿನ ಪ್ರಾಂಶುಪಾಲ ಮೊರಗೆ ಪ್ರಕಾಶ ಮಾತನಾಡಿ, ‘ಈ ವಿಚಾರ ಸಂಕಿರಣ ಪ್ರಸ್ತುತ ಚುನಾವಣಾ ವ್ಯವಸ್ಥೆಯ ಕುರಿತು ಪ್ರತಿಯೊಬ್ಬರನ್ನೂ ಚಿಂತನೆಗೆ ಹಚ್ಚುವ ಕೆಲಸ ಮಾಡುತ್ತಿದೆ. ಇಂಥ ಕಾರ್ಯಕ್ರಮಗಳು ನಿರಂತರವಾಗಿ ನಡೆದಾಗ ಸಮಾಜದಲ್ಲಿ ಜಾಗೃತಿ ಉಂಟಾಗುತ್ತದೆ’ ಎಂದು ಹೇಳಿದರು.

ಸಿಬ್ಬಂದಿ ಘಟಕದ ಕಾರ್ಯದರ್ಶಿ ಎಸ್.ವಿ.ಬಿರಾದಾರ ಮಾತನಾಡಿದರು. ಭಾರತೀಯ ಚುನಾವಣಾ ಸುಧಾರಣಾ ಹೋರಾಟ ಸಮಿತಿ ಸಂಸ್ಥಾಪಕ ರಮೇಶ ಧುತ್ತರಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿಚಾರ ಸಂಕಿರಣದಲ್ಲಿ ವಿದ್ಯಾರ್ಥಿನಿಯರಾದ ಸುಜಾತಾ, ರಕ್ಷಿತಾ, ಐಶ್ವರ್ಯ, ಜಯಶ್ರೀ, ಸೃಷ್ಟಿ, ಅಂಕಿತಾ ವಿಚಾರ ಮಂಡಿಸಿದರು. ಅವರಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.

ಮೀನಾಕ್ಷಿ, ಉಪನ್ಯಾಸಕರಾದ ಹನುಮಂತು, ಜಯಲಕ್ಷ್ಮಿ, ಹನುಮಂತು ಪಾಟೀಲ, ಜಯಶ್ರೀ, ಪೂಜಾ, ಬಸವರಾಜೇಶ್ವರಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ವಿಜಯಲಕ್ಷ್ಮಿ ಸ್ವಾಗತಿಸಿದರು. ಐಶ್ವರ್ಯ ಪ್ರಾರ್ಥನೆ ಗೀತೆ ಹಾಡಿದರು. ಮಾಣಿಕೇಶ್ವರಿ ನಿರೂಪಿಸಿದರು. ಹಸೀನಾ ಬೇಗಂ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-34-1138179314

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.