ಕಲಬುರಗಿ: ‘ವಿದ್ಯಾರ್ಥಿನಿಯರು ವಿದ್ಯಾಭ್ಯಾಸದೊಂದಿಗೆ ಸಂಸ್ಕಾರ, ಶಿಸ್ತು ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು’ ಎಂದು ಸರ್ಕಾರಿ ಸ್ವಾಯತ್ತ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸವಿತಾ ತಿವಾರಿ ಹೇಳಿದರು.

ನಗರದ ಜೇವರ್ಗಿ ಕಾಲೊನಿಯ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ 2025–26ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್ಎಸ್ಎಸ್, ರೆಡ್ ಕ್ರಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಬುದ್ಧ ಬಸವ ಅಂಬೇಡ್ಕರ್ ವೇದಿಕೆಯ ವಾರ್ಷಿಕೋತ್ಸವ ಮತ್ತು ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ ಪದವಿ ಹಾಗೂ ಎಂಎ ಕನ್ನಡ, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಎಂಎಸ್ಸಿ, ಎಂಕಾಂ ಅಂತಿಮ ವರ್ಷದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಮೋರಗೆ ಪ್ರಕಾಶ ವಿ. ಮಾತನಾಡಿ, ‘ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಎಲ್ಲಾ ವಿಭಾಗಗಳ ಶ್ರಮ, ಸಹಕಾರ ಮಹತ್ವದ್ದಾಗಿದೆ’ ಎಂದರು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಬಿ.ಎಸ್. ಬಿರಾದಾರ, ಹುಲಿಕಂಠರಾಯ ಗೌಡ, ಲಾಲ ಅಹ್ಮದ್, ವಾಣಿಶ್ರೀ ಸಗರಕರ್, ಧರ್ಮರಾಜ ಹೇರೂರ, ಜ್ಯೋತಿ ಕೆ.ಎಸ್., ಪದ್ಮಣ್ಣಾ ರಾಸಣಗಿ, ರೂಪಾಲಿ ರಾಠೋಡ, ಜ್ಯೋತಿ ರೆಡ್ಡಿ, ಪದ್ಮಾವತಿ ಧನ್ನಿ, ಶಿವಶರಣಪ್ಪ ಬಿರಾದಾರ, ಸಂತೋಷ ಹುಂಪಳಿ, ಮೀನಾಕ್ಷಿ ವಿಜಯಕುಮಾರ, ಶರಣಬಸಪ್ಪ ಚಿಕ್ಕಳ್ಳಿ, ವಿನೋದಕುಮಾರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-34-87135037

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.