ಕಲಬುರಗಿ: ‘ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಯದ 20ನೇ ಘಟಿಕೋತ್ಸವ ಏಪ್ರಿಲ್ 22ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದ್ದು, ಪದವಿ ವಿದ್ಯಾರ್ಥಿ, ಮಧ್ಯಪ್ರದೇಶ ರಾಜ್ಯದ ಉಜ್ಜೈನಿಯ ದಿವ್ಯಾಂಶು ಸಕ್ಸೇನಾ ಡಬಲ್ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ’ ಎಂದು ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ತಿಳಿಸಿದರು.

‘ಭಾರತದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಘಟಿಕೋತ್ಸವ ಭಾಷಣ ಮಾಡುವರು. ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಗೌರವ ಅತಿಥಿಯಾಗಿ ಪಾಲ್ಗೊಳ್ಳುವರು’ ಎಂದು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

‘10ನೇ ಘಟಿಕೋತ್ಸವದಲ್ಲಿ 24 ಮಂದಿಗೆ ಪಿಎಚ್.ಡಿ, ಒಬ್ಬರು ಎಂ.ಫಿಲ್ ಹಾಗೂ 2025ನೇ ಸಾಲಿನ 197 ಸ್ನಾತಕೋತ್ತರ ಪದವಿ, 547 ಪದವಿ ವಿದ್ಯಾರ್ಥಿಗಳು ಪದವಿ ಪ್ರಮಾಣ ಪತ್ರ ಪಡೆಯಲು ಅರ್ಹತೆ ಗಿಟ್ಟಿಸಿದ್ದಾರೆ. 699 ವಿದ್ಯಾರ್ಥಿಗಳು ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ 24 ಮಂದಿಗೆ ಪಿಎಚ್.ಡಿ, ಒಬ್ಬರಿಗೆ ಎಂ.ಫಿಲ್, 460 ಮಂದಿಗೆ ಪದವಿ ಹಾಗೂ 184 ಮಂದಿಗೆ ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.

ಅಲ್ಲದೇ, ‘ವಿವಿಧ ಕೋರ್ಸ್ಗಳಲ್ಲಿ ಮೊದಲ ರ್ಯಾಂಕ್ ಪಡೆದ ಒಟ್ಟು 22 ವಿದ್ಯಾರ್ಥಿಗಳು 23 ಚಿನ್ನದ ಪದಕಗಳಿಗೆ ಭಾಜನರಾಗಿದ್ದಾರೆ. ಆ ಪೈಕಿ ಬಿ.ಟೆಕ್ನ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ದಿವ್ಯಾಂಶು ಸಕ್ಸೇನಾ ಎರಡು ಚಿನ್ನದ ಪದಕ ಗಳಿಸಿದ್ದಾರೆ. ವಿಭಾಗದಲ್ಲಿ ಅಗ್ರ ರ್ಯಾಂಕ್ ಗಳಿಸಿದ್ದಕ್ಕೆ ಒಂದು ಪದಕ ಹಾಗೂ ಒಟ್ಟಾರೇ 22 ಮಂದಿಯಲ್ಲಿ ಅತಿ ಹೆಚ್ಚು ಅಂಕ ಪಡೆದಿದ್ದಕ್ಕಾಗಿ ದಿವ್ಯಾಂಶು ಪ್ರೊ. ಎ.ಎಂ.ಪಠಾಣ ಪ್ರಾಯೋಜಿತ ಮತ್ತೊಂದು ಚಿನ್ನದ ಪದಕಕ್ಕೆ ಅವರು ಭಾಜನರಾಗಿದ್ದಾರೆ’ ಎಂದು ವಿವರಿಸಿದರು.

ಕುಲಸಚಿವ ಪ್ರೊ. ಆರ್.ಆರ್.ಬಿರಾದಾರ, ಪರೀಕ್ಷಾ ನಿಯಂತ್ರಣಾಧಿಕಾರಿ ಪ್ರೊ.ಭರತಕುಮಾರ, ಪ್ರೊ.ಕೋಟಾ ಸಾಯಿಕೃಷ್ಣ, ಸಾರ್ವಜನಿಕ ಸಂಪರ್ಕಾಧಿಕಾರಿ ಗಣಪತಿ ಬಿ. ಸಿನ್ನೂರ, ಘಟಿಕೋತ್ಸವ ಮಾಧ್ಯಮ ಉಸ್ತುವಾರಿ ಮೊಹಮ್ಮದ್ ಜೋಹೆರ್, ಸಹಾಯಕ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಾಶ ಬಾಳಿಕಾಯಿ, ಶ್ರೀಲಕ್ಷ್ಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-34-531720512

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.