ಕಲಬುರಗಿ: ‘ವಿಕಸಿತ ಭಾರತ ಶಿಕ್ಷಾ ಅಧಿಷ್ಠಾನ (ವಿಬಿಎಸ್ಎ) ಮಸೂದೆ ಜಾರಿಗೆ ಬಂದರೆ ದೇಶದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಯಾಗಲಿದೆ. ಗುಣಮಟ್ಟದ ಶಿಕ್ಷಣ, ಕೌಶಲಾಭಿವೃದ್ಧಿ ಹಾಗೂ ಸಮಗ್ರ ಶೈಕ್ಷಣಿಕ ಪರಿವರ್ತನೆಗೆ ಮಸೂದೆ ಪೂರಕವಾಗಲಿದೆ’ ಎಂದು ಸಿಯುಕೆ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಹೇಳಿದರು.

ನಗರದ ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಸೆಂಟರ್ ಫಾರ್ ಎಜುಕೇಶನಲ್ ಆ್ಯಂಡ್ ಸೋಷಿಯಲ್ ಸ್ಟಡೀಸ್ (ಸಿಇಎಸ್ಎಸ್), ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ), ಪಿಡಿಎ ಎಂಜಿನಿಯರಿಂಗ್ ಕಾಲೇಜು ಸಹಯೋಗದಲ್ಲಿ ‘ವಿಕಸಿತ ಭಾರತ ಶಿಕ್ಷಾ ಅಧಿಷ್ಠಾನ ಮಸೂದೆ–2025’ ಕುರಿತು ಹಮ್ಮಿಕೊಂಡಿದ್ದ ದುಂಡುಮೇಜಿನ ಸಭೆಯಲ್ಲಿ ಅವರು ಮಾತನಾಡಿದರು.

‘ಕೇಂದ್ರ ಸರ್ಕಾರವು 2020ರ ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ಈ ಮಸೂದೆಯನ್ನು ಸಿದ್ಧಪಡಿಸಿದೆ. ಜಾರಿಗೆ ಬಂದರೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ), ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ), ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿಯು (ಎನ್ಸಿಟಿಇ) ಒಂದೇ ಸಂಸ್ಥೆಯ ವ್ಯಾಪ್ತಿಯಲ್ಲಿ ಬರಲಿವೆ. ದೇಶದ ಶೈಕ್ಷಣಿಕ ಸಂಸ್ಥೆಗಳು ಪಾರದರ್ಶಕ ಮತ್ತು ಪರಿಣಾಮಕಾರಿಯಾಗಿ ಒಂದೇ ಸೂರಿನಡಿ ಕಾರ್ಯನಿರ್ವಹಿಸಲು ಅನುಕೂಲವಾಗಲಿದೆ’ ಎಂದರು.

ವಿಧಾನ ಪರಿಷತ್ ಸದಸ್ಯ ಹಾಗೂ ಎಚ್ಕೆಇ ಸಂಸ್ಥೆಯ ಅಧ್ಯಕ್ಷ ಶಶೀಲ್ ಜಿ. ನಮೋಶಿ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತ-2047 ಕನಸು ಸಾಕಾರಕ್ಕೆ ಮತ್ತು ಶಿಕ್ಷಣ ಕ್ಷೇತ್ರದ ಸಮಗ್ರ ಸುಧಾರಣೆಗೆ ವಿಬಿಎಸ್ಎ–2025 ಮಸೂದೆ ಸಹಕಾರಿಯಾಗಲಿದೆ’ ಎಂದು ಹೇಳಿದರು.

‘ವಿಬಿಎಸ್ಎ ಮಸೂದೆ ಕುರಿತು ಕೇಂದ್ರ ಸರ್ಕಾರ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಿದ್ದು, ಶಿಕ್ಷಕರು ಮತ್ತು ಅಧ್ಯಾಪಕರು ತಮ್ಮ ಸಲಹೆ–ಸೂಚನೆಗಳನ್ನು ನೀಡಬೇಕು’ ಎಂದು ಸಲಹೆ ನೀಡಿದರು.

ಗದಗನ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಹಾಗೂ ಸಿಇಎಸ್ಎಸ್ ಕಾರ್ಯಕಾರಿ ಸದಸ್ಯ ವಿಷ್ಣುಕಾಂತ ಎಸ್.ಚಟಪಲ್ಲಿ ಮಾತನಾಡಿ, ‘ಸ್ವಾತಂತ್ರ್ಯ ನಂತರದ ದಿನಗಳಲ್ಲಿ ಇಲ್ಲಿಯವರೆಗೆ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳ ಸಂಖ್ಯೆ ಸೇರಿದಂತೆ ಮಹತ್ತರ ಬದಲಾವಣೆಗಳಾಗಿವೆ. ಮಸೂದೆ ಕುರಿತು ರಾಜ್ಯದಾದ್ಯಂತ ಶಿಕ್ಷಣ ತಜ್ಞರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳ ಅಭಿಪ್ರಾಯ ಸಂಗ್ರಹಿಸಿ ಕೇಂದ್ರದ ಜಂಟಿ ಸಂಸದೀಯ ಸಮಿತಿಗೆ ಸಲ್ಲಿಸಲಾಗುವುದು’ ಎಂದು ಹೇಳಿದರು.

ಪಿಡಿಎ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಸಿದ್ದರಾಮ ಪಾಟೀಲ ಸ್ವಾಗತಿಸಿದರು. ಸಿಇಎಸ್ಎಸ್ ಸಂಚಾಲಕಿ ಧರಣಿ ನಿರೂಪಿಸಿದರು. ಸಿಯುಕೆಯ ಕಾನೂನು ವಿಭಾಗದ ಡೀನ್ ಪ್ರೊ. ಬಸವರಾಜ್ ಕುಬಕಡ್ಡಿ ವಂದಿಸಿದರು.

ಅಲಯನ್ಸ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಸಿಇಎಸ್ಎಸ್ ಕಾರ್ಯಕಾರಿ ಸದಸ್ಯ ಪ್ರೊ. ವಿ.ಜೆ. ಬೈರಾರೆಡ್ಡಿ ಅವರು ವಿಬಿಎಸ್ಎ ಮಸೂದೆ ಕುರಿತು ಉಪನ್ಯಾಸ ನೀಡಿದರು.

ಬಳಿಕ ಮಸೂದೆ ಬಗ್ಗೆ ಚರ್ಚೆ, ಸಂವಾದ ನಡೆಯಿತು. ಸಿಯುಕೆ ಜೀವ ವಿಜ್ಞಾನ ವಿಭಾಗದ ಡೀನ್ ಪ್ರೊ. ಎನ್.ಸತ್ಯನಾರಾಯಣ ನಿರ್ವಹಿಸಿದರು. ಸಿಯುಕೆ, ಎಚ್ಕೆಇ ಸಂಸ್ಥೆಯ ಶಿಕ್ಷಣ ಸಂಸ್ಥೆಗಳು ಸೇರಿದಂತೆ ವಿವಿಧ ಕಾಲೇಜುಗಳ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-34-339691782

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.