ಕಲಬುರಗಿ: ‘ಸ್ವಾತಂತ್ರ್ಯ ಪೂರ್ವದಲ್ಲಿ ಮಹಿಳೆಗೆ ಪುರುಷರಷ್ಟು ಸ್ಥಾನಮಾನ ಇರಲಿಲ್ಲ. ಸಂವಿಧಾನ ರಚಿಸಿದ ಡಾ.ಅಂಬೇಡ್ಕರ್ ಅವರು ಮಹಿಳೆಯರಿಗೆ ಎಲ್ಲ ಹಕ್ಕುಗಳನ್ನು ನೀಡಿದರು’ ಎಂದು ಖಾಜಾ ಬಂದಾನವಾಜ್ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಮಾಧ್ಯಮ ವಿಭಾಗ ಹಾಗೂ ಮಾಧ್ಯಮ ಸಂಯೋಜಕಿ ನಮ್ರತಾ ರಾವುತ್ ಅಭಿಪ್ರಾಯಪಟ್ಟರು.

ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ವಿಶ್ವ ಪತ್ರಿಕಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ‘ಮಹಿಳಾ ಸಬಲೀಕರಣದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಪಾತ್ರ’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಶಿಕಾಂತ ಉಡಿಕೇರಿ ಮಾತನಾಡಿ, ‘ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಬರವಣಿಗೆಯ ಜೊತೆಗೆ ಓದಿಗೆ ಹೆಚ್ಚು ಮಹತ್ವ ಕೊಡಬೇಕು. ಪತ್ರಕರ್ತರಿಗೂ ಕೂಡ ಹಲವು ಜವಾಬ್ದಾರಿಗಳಿದ್ದು, ಪ್ರಾಮಾಣಿಕ ಮತ್ತು ವಸ್ತುನಿಷ್ಠ ಸುದ್ದಿಗಳಿಗೆ ಹೆಚ್ಚಿನ ಮಹತ್ವ ಕೊಡಬೇಕು’ ಎಂದರು.

ಸಿಂಡಿಕೇಟ್ ಸದಸ್ಯ ರಾಘವೇಂದ್ರ ಎಂ.ಭೈರಪ್ಪ ಮಾತನಾಡಿದರು.

ಸಂಯೋಜಕ ಸುರೇಶ ಜಂಗೆ ಅಧ್ಯಕ್ಷತೆ ವಹಿಸಿದ್ದರು. ಸಿಂಡಿಕೇಟ್ ಸದಸ್ಯ ಉದಯಕಾಂತ ಪಾಟೀಲ ಮಾತನಾಡಿದರು. ವಿಠ್ಠಲ್ ಚಿಕಣಿ ಇದ್ದರು. ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಅಶೋಕ ಶರಣಪ್ಪ ಪ್ರಾಸ್ತವಿಕವಾಗಿ ಮಾತನಾಡಿದರು. ರಾಜಕುಮಾರ ದಣ್ಣೂರು ಸ್ವಾಗತಿಸಿದರು. ತೀರ್ಥಕುಮಾರ ಬೆಳಕೋಟಾ ನಿರೂಪಿಸಿ, ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-34-257649842

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.