ಕಲಬುರಗಿ: ‘ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಸಾಧನೆಗಳು ಹಿಂದಿಗಿಂತಲೂ ಈಗ ಹೆಚ್ಚಿನ ಮಹತ್ವ ಪಡೆದುಕೊಂಡಿವೆ. ಆರ್ಥಿಕ ಸ್ವಾತಂತ್ರ್ಯ ಮತ್ತು ಆತ್ಮವಿಶ್ವಾಸ ಹೆಚ್ಚಿಸಿ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕಾರ ಸಂಘಗಳು ಮಹತ್ವದ ಪಾತ್ರ ವಹಿಸಿವೆ’ ಎಂದು ಸರ್ಕಾರಿ ಮಹಾವಿದ್ಯಾಲಯದ ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಸವಿತಾ ಪಾಟೀಲ ಹೇಳಿದರು.

ನಗರದ ಕೆಐಸಿಎಂ ತರಬೇತಿ ಸಂಸ್ಥೆಯಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ಕಲಬುರಗಿ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ ಹಾಗೂ ಸಹಕಾರ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಯ್ದ ಮಹಿಳಾ ಪತ್ತಿನ ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಒಂದು ದಿನದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಮಹಿಳೆಯರು ಧೈರ್ಯದಿಂದ ಎಲ್ಲ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡು ತರಬೇತಿಯ ಸದುಪಯೋಗ ಪಡೆಯ ಬೇಕು’ ಎಂದರು.

ಕಲಬುರಗಿ ಉಪವಿಭಾಗದ ಸಹಾಯಕ ಸಂಘಗಳ ಸಹಕಾರ ನಿಬಂಧಕ ಸಂಜಯಕುಮಾರ ಅವರು, ‘ಕಾನೂನು ತಿದ್ದುಪಡಿ’, ನಾಲ್ಕು ಚಕ್ರ ಚಾರಿಟಬಲ್ ಟ್ರಸ್ಟ್ನ ಮುಖ್ಯಸ್ಥೆ ಮಾಲಾಶ್ರೀ ಕಣ್ಣಿ ಅವರು ‘ಮಹಿಳಾ ಸಬಲೀಕರಣ’ ಹಾಗೂ ಕೆಐಸಿಎಂ ತರಬೇತಿ ಕೇಂದ್ರದ ಪ್ರಾಂಶುಪಾಲ ಅರುಣಕುಮಾರ ಬಿ. ಹರಸೂರ ಅವರು ‘ಸಹಕಾರ ಸಂಘಗಳಲ್ಲಿ ಲೆಕ್ಕ ಪತ್ರ ನಿರ್ವಹಣೆ’ ಕುರಿತು ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಸಹಕಾರಿ ಒಕ್ಕೂಟದ ಸಿಇಒ ಮಂಜುಳಾ ಎಸ್. ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ವೀರಣ್ಣರೆಡ್ಡಿ ಎಸ್. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಒಕ್ಕೂಟದ ಉಪಾಧ್ಯಕ್ಷೆ ಸುನಂದಾ ಪಾಟೀಲ, ಕಲಬುರಗಿ ಜಿಲ್ಲಾ ಒಕ್ಕೂಟದ ನಿರ್ದೇಶಕರಾದ ಅಯ್ಯನಗೌಡ ಮಾಲೀಪಾಟೀಲ, ಮಹೇಶ ಪಸಾರ, ಕಲ್ಯಾಣರಾವ ಮೂಲಗೆ, ಮಲ್ಲಿಕಾರ್ಜುನ ಎಲಿಮನಿ, ಸಹಾಯಕ ನಿಬಂಧಕ ಸಂಜೀವ ಕುಮಾರ ಹಾಗೂ ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಶಿವಲೀಲಾ ಕಲುಗುರ್ತಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-34-465700409

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.