ಕಲಬುರಗಿ: ‘ಯುವಜನರು ಸಂಸ್ಕೃತಿಯ ವಾರಸುದಾರರು. ವಿದ್ಯಾರ್ಥಿಗಳು ಮನಸು ಮಾಡಿದರೆ ಮಾತ್ರ ಭಾರತೀಯ ಸಂಸ್ಕೃತಿ ಉಳಿಯಲು ಸಾಧ್ಯ’ ಎಂದು ನೂತನ ವಿದ್ಯಾಲಯ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಪ್ರಾಚಾರ್ಯೆ ಸಿದ್ದಮ್ಮ ಗೊಬ್ಬುರ ಹೇಳಿದರು.

ನಗರದ ನೂತನ ವಿದ್ಯಾಲಯ ಪದವಿ ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ‘ಎಥ್ನಿಕ್ ಡೇ’ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಮ್ಮ ಆಚಾರ-ವಿಚಾರಗಳು, ವೇಷಭೂಷಣ, ಊಟೋಪಚಾರ ಎಲ್ಲವೂ ಅನುಪಮವಾಗಿದ್ದು, ವಿದೇಶಿಯರು ಇತ್ತ ಕಡೆ ವಾಲುತಿದ್ದರೆ, ನಾವು ಆಧುನಿಕತೆಯ ಭರಾಟೆಯಲ್ಲಿ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗುತ್ತ ನಮ್ಮ ಸಂಸ್ಕೃತಿಯನ್ನು ಮರೆಯುತ್ತಿರುವುದು ವಿಷಾದನೀಯ’ ಎಂದು ಕಳವಳ ವ್ಯಕ್ತಪಡಿಸಿದರು.

ನೂತನ ವಿದ್ಯಾಲಯ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಬಗೆ ಬಗೆಯ ಉಡುಗೆ ತೊಟ್ಟು ಬಂದಿದ್ದರು. ಡೊಳ್ಳು ಕುಣಿತ, ಲಂಬಾಣಿ ನೃತ್ಯ, ಭರತನಾಟ್ಯ ಪ್ರದರ್ಶನ ನೀಡಿದರು.

ನೂತನ ವಿದ್ಯಾಲಯ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ದಯಾನಂದ ಎಂ.ಶಾಸ್ತ್ರಿ ಹಾಗೂ ನೂತನ ವಿದ್ಯಾಲಯ ಪದವಿ ಮಹಾವಿದ್ಯಾಲಯದ ನಿರ್ದೇಶಕ ಪ್ರೊ.ಗೋವಿಂದ ಪೂಜಾರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-34-1259909394

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.