ಕಲಘಟಗಿ: ‘ಹದಿಹರೆಯದ ಮಕ್ಕಳಿಗೆ ಪಾಲಕರು ಹಾಗೂ ಶಿಕ್ಷಕರು ಸರಿಯಾದ ಮಾರ್ಗದರ್ಶನ ನೀಡಬೇಕು’ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪವು ಶನಿವಾರ ಆಯೋಜಿಸಿದ್ದ ‘ಹದಿಹರೆಯದ ಸಮಸ್ಯೆಗಳು ಹಾಗೂ ಪರಿಹಾರ’ ಕುರಿತು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಹದಿಹರೆಯದ ಮಕ್ಕಳು ಶಾರೀರಿಕ ಹಾಗೂ ಭಾವನಾತ್ಮಕ ಬದಲಾವಣೆಯಿಂದ ಆತಂಕ, ಖಿನ್ನತೆಗೆ ಒಳಗಾಗುವ ಸಾಧ್ಯತೆ ಇರುತ್ತದೆ. ಈ ಸಮಯದಲ್ಲಿ ದಾರಿ ತಪ್ಪುವ ಸಾಧ್ಯತೆ ಹೆಚ್ಚಾಗಿರುತ್ತದೆ. ದುಶ್ಚಟಗಳ ದಾಸರೂ ಆಗಬಹುದು’ ಎಂದರು.

ಸಂಘದ ಶಿಕ್ಷಣ ಮಂಟಪದ ಸಂಚಾಲಕ ವೀರಣ್ಣ ಒಡ್ಡೀನ ಮಾತನಾಡಿ, ‘ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು’ ಎಂದರು.

ಹದಿಹರೆಯದ ಮನೋರೋಗ ತಜ್ಞೆ ಸುಜ್ಞಾನಿದೇವಿ ಪಾಟೀಲ ಮಾತನಾಡಿ, ಸಂವಾದದ ಮೂಲಕ ಹದಿಹರೆಯದ ಸಮಸ್ಯೆಗಳ ಕುರಿತು ಉಪನ್ಯಾಸ ನೀಡಿದರು.

ಕಾಲೇಜಿನ ಪ್ರಾಚಾರ್ಯ ಎನ್.ಎಂ. ಸಂಗಮನವರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕಾರಿ ಸಮಿತಿ ಸದಸ್ಯರಾದ ಮಹೇಶ ಹೊರಕೇರಿ, ಕೆ.ಎಸ್. ಪಾಟೀಲ, ಮಂಜುನಾಥ ಕುರಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-24-1161195765

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.