ವೇಮಗಲ್: ಹೋಬಳಿಯ ಕ್ಯಾಲನೂರು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸೋಮವಾರ 2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ನೂತನ ಪಿಯು ಕಾಲೇಜು ತರಗತಿಗಳ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಈ ವೇಳೆ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಬಿದ್ದು ಹಣ ಪೋಲು ಮಾಡಿಕೊಳ್ಳಬೇಡಿ. ಸರ್ಕಾರಿ ಶಾಲೆಗಳಲ್ಲಿ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ, ಸಾಕ್ಸ್ ಹಾಗೂ ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದರು.

ನಮಗೆ ದೇವಸ್ಥಾನ, ಮಸೀದಿ, ಚರ್ಚ್, ದರ್ಗಾ ಎಲ್ಲವೂ ಸರ್ಕಾರಿ ಶಾಲೆಗಳೇ ಆಗಿವೆ. ಮಕ್ಕಳನ್ನು ಇಲ್ಲಿಗೆ ಕಳುಹಿಸಿ, ಶಾಲೆ ಉಳಿವಿಗೆ ಪ್ರೇರೇಪಿಸಿ. ದೇವಸ್ಥಾನದಲ್ಲಿ ಸ್ವಚ್ಛತೆ ಕಾಪಾಡಿದಂತೆ ನಮ್ಮ ಶಾಲೆಗಳನ್ನೂ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದರು.

ಶಾಲಾ ಆವರಣದಲ್ಲಿರುವ ಕಸವನ್ನು ತಕ್ಷಣವೇ ತೆರವುಗೊಳಿಸಲು ಸ್ಥಳದಲ್ಲಿದ್ದ ಪಿಡಿಒ ಅವರಿಗೆ ಸೂಚನೆ ನೀಡಿದರು.

ಶಿಕ್ಷಕ ವೃತ್ತಿ ಎಂಬುದು ಕೇವಲ ಉದ್ಯೋಗವಲ್ಲ. ಅದು ದೇಶದ ಭವಿಷ್ಯ ರೂಪಿಸುವ ಶಕ್ತಿ. ಇಂದು ಯಾರೇ ಉತ್ತಮ ವ್ಯಕ್ತಿಗಳಾಗಿದ್ದಾರೆ ಅವರ ಹಿಂದೆ ಶಿಕ್ಷಕರ ಪರಿಶ್ರಮವಿರುತ್ತದೆ ಎಂದರು.

ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ, ಸಮವಸ್ತ್ರ ವಿತರಿಸಲಾಯಿತು.

ವಿಧಾನಪರಿಷತ್ ಸದಸ್ಯ ಅನಿಲ್ ಕುಮಾರ್, ಕೋಲಾರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮುರಳಿ, ಉರಟ ಅಗ್ರಹಾರ ಚೌಡರೆಡ್ಡಿ, ಮುನಿರಾಜು, ಶಿವಕುಮಾರ್, ಪಿಡಿಒ ಮಂಜುನಾಥ್ ಪ್ರಸಾದ್, ಅನಿಲ್, ಪ್ರಕಾಶ್, ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ, ರಾಧಮ್ಮ, ಪ್ರೊ.ಆನಂದ್, ಎಸ್.ಆರ್.ರಾಮಲಿಂಗಪ್ಪ, ಕೌನ್ಸಿಲರ್ ಪ್ರಕಾಶ್, ಅಮ್ಮನಲ್ಲೂರು ನಾಗೇಶ್, ಶ್ರೀನಿವಾಸ್, ರಾಜೇಶ್, ನಾಗರಾಜ್, ರಾಮಾಂಜಿನಪ್ಪ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-18-1562420181

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.