ಕನಕಪುರ: ‘ಸಾಧನೆ ಬೆನ್ನತ್ತಿದರೆ ಗುರಿ ತಲುಪುತ್ತೇವೆ ಎಂಬುದಕ್ಕೆ ವರನಟ ಡಾ.ರಾಜಕುಮಾರ್ ಮತ್ತು ಸಾಹಿತಿ ಶಿವರಾಮ ಕಾರಂತರೇ ಮಾದರಿ. ಅವರನ್ನು ದಾರಿ ದೀಪವಾಗಿಸಿಕೊಂಡು ಸಾಧನೆ ಮಾಡಬೇಕೆಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ತಾಲ್ಲೂಕಿನ ಶಿವನಹಳ್ಳಿ ಬಳಿ ಇರುವ ಬಮೂಲ್ ಮೆಗಾ ಡೇರಿಯಲ್ಲಿ ಗುರುವಾರ ಆಯೋಜಿಸಿದ್ದ ಹಾಲು ಉತ್ಪಾದಕ ರೈತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಡಾ.ರಾಜಕುಮಾರ್ ಅವರು ಓದಿದ್ದು ನಾಲ್ಕನೇ ತರಗತಿ ಮಾತ್ರ. ಆದರೆ ಇಡೀ ಭಾರತದಲ್ಲೇ ಉತ್ತಮ ಕಲಾವಿದರಾಗಿ ಪದ್ಮಭೂಷಣ ಪ್ರಶಸ್ತಿ ಪಡೆದರು. ಶಿವರಾಮ ಕಾರಂತರು ಪದವಿ ಪಡೆದಿರಲಿಲ್ಲ, ಜ್ಞಾನಪೀಠ ಪ್ರಶಸ್ತಿ ಪಡೆದರು. ಅವರಲ್ಲ ಯುಗಪುರುಷರಿದ್ದಂತೆ, ಅವರಂತೆ ನೀವು ಸಾಧನೆ ಮಾಡಬೇಕೆಂದು ಸಲಹೆ ನೀಡಿದರು.

ಗ್ರಾಮೀಣ ಭಾಗದ ಮಕ್ಕಳು ನಗರ ಪ್ರದೇಶದ ಮಕ್ಕಳಿಗಿಂತಲೂ ಹೆಚ್ಚಿನ ಜ್ಞಾನವಿದೆ. ಆದರೆ ಇಂದಿನ ಯುವಪೀಳಿಗೆ ಹೆಚ್ಚಿನ ಸಮಯವನ್ನು ಮೊಬೈಲ್ನಲ್ಲಿ ಕಳೆಯುತ್ತಾ ಸಮಯ ವ್ಯರ್ಥ ಮಾಡುತ್ತಿದ್ದೀರಿ, ಮೊಬೈಲ್ ಬಿಟ್ಟು ಓದಿನ ಕಡೆ, ನಿಮ್ಮ ಗುರಿಯ ಕಡೆ ಗಮನ ನೀಡಿ ಎಂದು ಕಿವಿಮಾತು ಹೇಳಿದರು.

‘ಲೋಕಸಭೆ ಚುನಾವಣೆಯಲ್ಲಿ ಜನರು ಬೇರೆಯವರನ್ನು ಆಯ್ಕೆ ಮಾಡಿಕೊಂಡರು. ನಾನು ವಿಶ್ರಾಂತಿ ತೆಗೆದುಕೊಳ್ಳೋಣವೆಂದರೆ ನಮ್ಮ ಮುಖಂಡರು ಒತ್ತಾಯ ಮಾಡಿ ಬಮೂಲ್ ನಿರ್ದೆಶಕರಾಗಿ ಆಯ್ಕೆ ಮಾಡಿದರು. ಈಗ ಅವಿರೋಧವಾಗಿ ಆಯ್ಕೆ ಮಾಡಿ ಅಧ್ಯಕ್ಷನ ಜವಾಬ್ದಾರಿ ನೀಡಿದ್ದಾರೆ. ಅಧಿಕಾರವಹಿಸಿಕೊಂಡ 9 ತಿಂಗಳಲ್ಲಿ ₹65 ಕೋಟಿಯಷ್ಟು ಲಾಭವಾಗಿದೆ. ರೈತರು ಮತ್ತು ಕಾರ್ಮಿಕರ ಅಭಿವೃದ್ಧಿಗೆ ಬಳಸಲಾಗುತ್ತಿದೆ’ ಎಂದು ಡಿ.ಕೆ.ಸುರೇಶ್ ತಿಳಿಸಿದರು.

ತಾಲ್ಲೂಕಿನ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗಬೇಕೆಂದು ಪಂಚಾಯಿತಿಗೊಂದು ಪಬ್ಲಿಕ್ ಶಾಲೆ ಮಾಡಲಾಗುತ್ತಿದೆ. ಬಮೂಲ್ ನಿಂದ ಶಾಲೆಗಳಿಗೆ ಉಚಿತವಾಗಿ ಬಸ್ ನೀಡಲಾಗುತ್ತಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್.ರವಿ ಮಾತನಾಡಿದರು.

ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 300 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಚೆಕ್ ಹಾಗೂ ನೌಕರರಿಗೆ ಉಡುಗೊರೆ ವಿತರಿಸಲಾಯಿತು.

ಬಮೂಲ್ ಉಪಾಧ್ಯಕ್ಷ ರಾಜಣ್ಣ, ನಿರ್ದೇಶಕರಾದ ಪಿ.ನಾಗರಾಜು, ಲಿಂಗೇಶ್ ಕುಮಾರ್, ಮುನಿರಾಜು, ಸತೀಶ್, ಎಚ್.ಎಸ್.ಹರೀಶ್ ಕುಮಾರ್, ಮಂಜುನಾಥ್, ಆನಂದ್, ಕೃಷ್ಣಯ್ಯ, ಭೈರೇಗೌಡ, ಆರ್ಇಎಸ್ ಅಧ್ಯಕ್ಷ ಎಚ್ ಕೆ ಶ್ರೀಕಂಠ, ಬಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಎಂ.ಡಿ.ವಿಜಯದೇವು, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಎನ್.ದಿಲೀಪ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-14-912177593

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.