ಕನಕಪುರ: ನಗರದ ಆರ್ಇಎಸ್ ಗ್ರಾಮೀಣ ಪದವಿ ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ದೂಂತೂರು ಮಾರೇಗೌಡ ಸಭಾಂಗಣದಲ್ಲಿ ಕಲಾಸಂಗಮ ಕಾರ್ಯಕ್ರಮ ಶನಿವಾರ ನಡೆಯಿತು.

ಕಾರ್ಯಕ್ರಮವನ್ನು ಜಾನಪದ ಗಾಯಕ ಅಪ್ಪಗೆರೆ ತಿಮ್ಮರಾಜು ಉದ್ಘಾಟಿಸಿದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಜಿ.ಎಸ್.ಶಿವರುದ್ರಪ್ಪ ಅವರು ಶಿಕ್ಷಕರಾಗಿದ್ದ ಸಂಸ್ಥೆ ಇದಾಗಿದ್ದು, 42 ವಿದ್ಯಾರ್ಥಿಗಳೊಂದಿಗೆ ಆರಂಭವಾದ ಸಂಸ್ಥೆ ಇಂದು ದೊಡ್ಡ ಆಲದ ಮರದಂತೆ ಬೃಹದಾಕಾರವಾಗಿ ಬೆಳೆದಿದೆ ಎಂದರು.

ವಿದ್ಯಾರ್ಥಿಗಳು ಕಲಾಭಿಮಾನದ ಜೊತೆಗೆ ಉತ್ತಮ ಸಂಸ್ಕೃತಿ, ಸಂಸ್ಕಾರ ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.

ಚಲನಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಮಾತನಾಡಿ, ವಿದ್ಯಾರ್ಥಿಗಳು ಹಲವು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಗಾಂಜಾ, ಕುಡಿತ, ಡ್ರಗ್ಸ್ಗಳ ಚಟಕ್ಕೆ ಬಲಿಯಾಗುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ಸಂಸ್ಥೆ ಅಧ್ಯಕ್ಷ ಎಚ್.ಕೆ. ಶ್ರೀಕಂಠ ಮಾತನಾಡಿ, ಕಲಾಸಂಗಮ ಹೆಸರಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಜಾನಪದ, ಸಂಗೀತ, ಸಿನಿಮಾ ಕ್ಷೇತ್ರಗಳಿಂದ ಸಾಧಕರನ್ನ ಕರೆತರಲಾಗಿದೆ ಎಂದರು.

ಹಾಸ್ಯ ಕಲಾವಿದ ಅಪ್ಪಣ್ಣ ರಾಮದುರ್ಗ ಹಾಸ್ಯಗಳಿಂದ ವಿದ್ಯಾರ್ಥಿಗಳನ್ನು ರಂಜಿಸಿದರು.

ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಎನ್ಎಸ್ಎಸ್, ಎನ್ಸಿಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.

ಎಂ.ಎಸ್.ಕೆಂಪೇಗೌಡ, ಅಪ್ಪಾಜಿ, ಸಂಚಾಲಕಿ ಸುಮಲತಾ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-14-116380543

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.