ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಶ್ರೀ ಚಾರಿಟಬಲ್‌ ಟ್ರಸ್ಟ್‌ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Published 31 ಮೇ 2024, 16:25 IST
Last Updated 31 ಮೇ 2024, 16:25 IST
ಅಕ್ಷರ ಗಾತ್ರ

ಬೆಂಗಳೂರು: ಕನಕಶ್ರೀ ಚಾರಿಟಬಲ್‌ ಟ್ರಸ್ಟ್‌ ಪ್ರತಿಭಾ ಪುರಸ್ಕಾರಕ್ಕಾಗಿ ಹಾಲುಮತ ಸಮಾಜದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  

ಎಸ್‌ಎಸ್‌ಎಲ್‌ಸಿಯಲ್ಲಿ ಶೇ 95ಕ್ಕಿಂತ ಅಧಿಕ, ಪಿಯು‌ಸಿಯಲ್ಲಿ ಶೇ 90ಕ್ಕಿಂತ ಅಧಿಕ ಅಂಕ ಪಡೆದಿರುವ, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕುರುಬ (ಹಾಲುಮತ) ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. 

ಅರ್ಜಿಯ ಜೊತೆಗೆ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ ಅಥವಾ ಜಾತಿ ಪ್ರಮಾಣ ಪತ್ರಗಳ ದೃಢೀಕೃತ ನಕಲು ಪ್ರತಿ, ಆಧಾರ್ ಕಾರ್ಡ್ ನಕಲು ಪ್ರತಿ ಮತ್ತು ಭಾವಚಿತ್ರಗಳೊಂದಿಗೆ ಅರ್ಜಿಸಲ್ಲಿಸಬೇಕು. ಅರ್ಜಿಯಲ್ಲಿ ತಂದೆ, ತಾಯಿಯ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಇರಬೇಕು. ದಾಖಲೆಗ  ಅರ್ಜಿಯನ್ನು ಜೂನ್ 15ರೊಳಗೆ ಟಿ.ಬಿ.ಬಳಗಾವಿ, ಅಧ್ಯಕ್ಷ, ಕನಕಶ್ರೀ ಚಾರಿಟಬಲ್‌ ಟ್ರಸ್ಟ್‌, ಕೇರ್ ಆಫ್ ಕನಕಶ್ರೀ ಗೃಹ ನಿರ್ಮಾಣ ಸಹಕಾರ ಸಂಘ, ನಂ.20/31, 6ನೇ ಮುಖ್ಯರಸ್ತೆ, 80 ಅಡಿ ರಸ್ತೆ, ಕೆ.ಎಚ್.ಬಿ ಕಾಲೊನಿ– 1ನೇ ಹಂತ, ಬಸವೇಶ್ವರ ನಗರ, ಬೆಂಗಳೂರು – 560079 ಇಲ್ಲಿಗೆ ಅಂಚೆಯ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು. ಹೆಚ್ಚಿನ ಮಾಹಿತಿಗೆ 9483425046, 94845101696 ಸಂಪರ್ಕಿಸಬಹುದು ಎಂದು ಟ್ರಸ್ಟ್‌ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT