ಶಿರ್ವ: ‘ಶಿಕ್ಷಕರು ಮತ್ತು ಸಮಾಜ ಸೇವಕರನ್ನು ಸಮಾಜ ಸದಾ ನೆನಪಿನಲ್ಲಿ ಇಡುತ್ತದೆ. ಸ್ಪರ್ಧಾತ್ಮಕ ಕಾಲಘಟ್ಟದಲ್ಲಿ ಕನ್ನಡ ಶಾಲೆಗಳು ಉಳಿಯಲು ಕಾಲಕ್ಕೆ ತಕ್ಕಂತೆ ಪರಿವರ್ತನೆ ಅಗತ್ಯ’ ಎಂದು ಕರ್ಣಾಟಕ ಬ್ಯಾಂಕ್ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ರಾಘವೇಂದ್ರ ಶ್ರೀನಿವಾಸ ಭಟ್ ಹೇಳಿದರು.

ಇನ್ನಂಜೆ ಎಸ್.ವಿ.ಎಚ್ ಕನ್ನಡ ಮಾಧ್ಯಮ ಶಾಲೆಗೆ ಬ್ಯಾಂಕ್ನ ಸಿಎಸ್ಆರ್ ನಿಧಿಯಿಂದ ಕೊಡುಗೆ ನೀಡಿದ ವಾಹನವನ್ನು ಉಡುಪಿ ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಅವರಿಗೆ ದಾಖಲೆ ಸಹಿತ ಕೀ ಹಸ್ತಾಂತರಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಪೂರ್ವದಲ್ಲಿ ಸೋದೆ ಸ್ವಾಮೀಜಿ ವಿಶ್ವೇಂದ್ರತೀರ್ಥ ಶ್ರೀಪಾದರಿಂದ ಸಂಸ್ಥಾಪಿಸಲ್ಪಟ್ಟ ಈ ವಿದ್ಯಾಸಂಸ್ಥೆ ಭವಿಷ್ಯದ ಕನಸನ್ನು ಹೊತ್ತು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿದೆ. ಶಿಕ್ಷಣ ಕ್ಷೇತ್ರಕ್ಕೆ ಉಡುಪಿ ಅಷ್ಟಮಠಗಳ ಅದಮಾರು, ಪೇಜಾವರ, ಸೋದೆ ಮಠಗಳ ಕೊಡುಗೆ ಅವಿಸ್ಮರಣೀಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಉಡುಪಿ ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಮಾತನಾಡಿ, ಕಾಲ ಬದಲಾಗುತ್ತಿದೆ, ವ್ಯವಸ್ಥೆಗಳು ಜಾಸ್ತಿಯಾಗುತ್ತಿವೆ. ಮಕ್ಕಳ ಬೌದ್ಧಿಕ ಮಟ್ಟ ಅಭಿವೃದ್ಧಿಗೆ ಶಿಕ್ಷಣದ ಜೊತೆಗೆ ಪೂರಕ ವ್ಯವಸ್ಥೆಗಳೂ ಆಗಬೇಕು. ಕರ್ಣಾಟಕ ಬ್ಯಾಂಕ್ ಹಾಗೂ ಸೋದೆ ಮಠಕ್ಕೆ ಅವಿನಾಭಾವ ಸಂಬಂಧವಿದೆ. ಇನ್ನಂಜೆ ಶಿಕ್ಷಣ ಸಂಸ್ಥೆಗೆ ಇದು ಮೂರನೇ ಬಸ್ ಕೊಡುಗೆಯಾಗಿದೆ ಎಂದು ಹೇಳಿದರು.

ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ರಾಧಾಕೃಷ್ಣ ಎಸ್. ಐತಾಳ್ ಸ್ವಾಗತಿಸಿದರು. ಟ್ರಸ್ಟ್ ಉಪಾಧ್ಯಕ್ಷ ಪಿ. ಶ್ರೀನಿವಾಸ ತಂತ್ರಿ, ಎಸ್ವಿಎಚ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್, ಕರ್ಣಾಟಕ ಬ್ಯಾಂಕ್ ಉಡುಪಿ ವಲಯ ಸಹಾಯಕ ಮಹಾಪ್ರಬಂಧಕ ರಮೇಶ್ ವೈದ್ಯ, ಉಡುಪಿ ಶಾಖಾಧಿಕಾರಿ ಪ್ರಶಾಂತ್ ರಾವ್, ಬಂಟಕಲ್ಲು ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ನಾಗರಾಜ ಭಟ್, ಇನ್ನಂಜೆ ಪ್ರೌಢಶಾಲೆ ಮುಖ್ಯಶಿಕ್ಷಕ ನಟರಾಜ ಉಪಾಧ್ಯಾಯ ಭಾಗವಹಿಸಿದ್ದರು.

ಉಪನ್ಯಾಸಕಿ ರೋಲಿನ್ ಪ್ರಿಯಾ ಕ್ಯಾಸ್ತಲಿನೊ ನಿರೂಪಿಸಿದರು. ಪ್ರಾಂಶುಪಾಲ ರಾಜೇಂದ್ರ ಪ್ರಭು ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-28-752294728

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.