ಕಾರಟಗಿ: ‘ಯಾವುದೇ ಕೋಚಿಂಗ್ ಸೆಂಟರ್ಗಳನ್ನು ಆರಂಭಿಸಲು ಶಿಕ್ಷಣ ಇಲಾಖೆಯ ಜೊತೆಗೆ ಇತರ ಇಲಾಖೆಗಳ ಅನುಮತಿ ಪಡೆಯಬೇಕು. ಅನುಮತಿ ಇರದ ಕೋಚಿಂಗ್ ಸೆಂಟರ್ಗಳ ಮೇಲೆ ನಿರಂತರವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಈಗ ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ತಾಲ್ಲೂಕುಗಳಲ್ಲಿರುವ ಅನಧಿಕೃತ ಕೋಚಿಂಗ್ ಸೆಂಟರ್ಗಳಿಗೆ ನೋಟಿಸ್ ಜಾರಿ ಮಾಡಿ, ಇಲಾಖೆಯ ನಿಯಮಾವಳಿ ಪಾಲನೆ ಮಾಡಿ, ಅನುಮತಿ ಪಡೆದು ಕೇಂದ್ರ ನಡೆಸುವಂತೆ ಸೂಚಿಸಲಾಗಿದೆ’ ಎಂದು ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ನಟೇಶ ತಿಳಿಸಿದರು.

‘ಮಹೇಶ ಟಿ. ನಾಯಕ ಎಂಬುವವರು ಸಿದ್ದಾಪುರ ಗ್ರಾಮದಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಕೋಚಿಂಗ್ ಸೆಂಟರ್ಗಳ ಬಗ್ಗೆ ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ ಸ್ಪರ್ಧಾ ಚಂದನ ಹಾಗೂ ಶ್ರೀ ಗುರು ಕೋಚಿಂಗ್ ಸೆಂಟರ್ಗಳಿಗೆ ಬುಧವಾರ ಭೇಟಿ ನೀಡಿ, ಪರಿಶೀಲಿಸಿ, ತಿಳಿವಳಿಕೆ ನೀಡಲಾಯಿತು. ಅನುಮತಿ ಪಡೆಯುವವರೆಗೆ ಕೇಂದ್ರಗಳನ್ನು ತೆರೆಯದಿರಲು ಸೂಚಿಸಲಾಯಿತು. ಇಲಾಖೆಯ ಸಿಆರ್ಸಿ ಹಾಗೂ ಇಸಿಒ ಅಧಿಕಾರಿಗಳು ಆ ಕೇಂದ್ರಗಳಿಗೆ ಭೇಟಿ ನೀಡಿ ವರದಿ ನೀಡುವಂತೆ ಸೂಚಿಸಲಾಗಿದೆ. ಅನಧಿಕೃತವಾಗಿ ಮತ್ತೆ ಕೇಂದ್ರ ಆರಂಭಿಸಿದ್ದರೆ ಪೊಲೀಸರಿಗೆ ದೂರು ನೀಡಲಾಗುವುದು’ ಎಂದು ಹೇಳಿದರು.

‘ಲೋಕೋಪಯೋಗಿ, ಅಗ್ನಿಶಾಮಕ ಠಾಣೆ, ಆರೋಗ್ಯ, ಪೊಲೀಸ್, ಹಿಂದುಳಿದ ವರ್ಗದ ಜೊತೆಗೆ ಸ್ಥಳೀಯ ಸಂಸ್ಥೆಗಳಿಂದ ಅನುಮತಿ ಪಡೆದರೆ ಮಾತ್ರ ನಾವು ಅನುಮತಿ ನೀಡುತ್ತೇವೆ. ಬೇಸಿಗೆ ರಜೆಯಲ್ಲಿ ಯಾವುದೇ ಅನುಮತಿ ಪಡೆಯದೆ ವಸತಿ ಸಹಿತ ಹಾಗೂ ವಸತಿ ರಹಿತ ಕೋಚಿಂಗ್ ಸೆಂಟರ್ಗಳನ್ನು ನಡೆಸುತ್ತಾ ಹಣ ಮಾಡುವಲ್ಲಿ ಅನೇಕರು ನಿರತರಾಗಿರುವ ಬಗ್ಗೆ ಮಾಹಿತಿ ಇದೆ. ಸರ್ಕಾರದ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು, ಮಕ್ಕಳಿಗೆ ಸುರಕ್ಷತೆ ಒದಗಿಸಲು ನಮ್ಮ ಇಲಾಖೆ ಸದಾ ಸನ್ನದ್ಧವಾಗಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-35-562670906

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.