ಕಾರಟಗಿ: ‘ಮಕ್ಕಳಿಗೆ ಸರ್ಕಾರದ ಸೌಲಭ್ಯಗಳ ಜೊತೆಗೆ ಗುಣಮಟ್ಟದ ಹಾಗೂ ನೈತಿಕ ಶಿಕ್ಷಣ ನೀಡಲಾಗುತ್ತಿದೆ. ಎಸ್ಡಿಎಂಸಿ ಸದಸ್ಯರು, ಪಾಲಕರು ಅಧಿಕ ಸಂಖ್ಯೆಯ ದಾಖಲೆಗೆ ಸಹಕಾರ ನೀಡಬೇಕು’ ಎಂದು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಮರೇಶ ಮೈಲಾಪುರ ಹೇಳಿದರು.

ಪಟ್ಟಣದ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಿಸಿ ಮಾತನಾಡಿದರು.

ಮಕ್ಕಳ ದಾಖಲಾತಿ ಆಂದೋಲನ ಕಾರ್ಯಕ್ರಮದಲ್ಲಿ ಮುಖ್ಯಗುರು ಅನುಸೂಯ ಕಂಚಿಮಠ ಮಾತನಾಡಿ, ‘5 ವರ್ಷ 8 ತಿಂಗಳ ಮಕ್ಕಳನ್ನು ನಮ್ಮ ಶಾಲೆಗೆ ಸೇರಿಸಿರಿ. ನಮ್ಮಲ್ಲಿ ವೈಯಕ್ತಿಕ ಕಾಳಜಿ ಜೊತೆಗೆ ಉತ್ತಮ ಶಿಕ್ಷಣ ನೀಡಲಾಗುವುದು. ಪಾಲಕರು ವಿಶೇಷವಾಗಿ ಬಾಲಕಿಯರಿಗಾಗಿ ಇರುವ ನಮ್ಮ ಶಾಲೆಗೆ ದಾಖಲಾತಿ ಮಾಡಬೇಕು’ ಎಂದರು.

ಎಸ್ಡಿಎಂಸಿ ಅಧ್ಯಕ್ಷ ಆಂಜನೇಯ ಬೇವಿನಾಳ ಮಾತನಾಡಿ, ‘ಸರ್ಕಾರದ ಸೌಲಭ್ಯಗಳಲ್ಲದೇ, ನಮ್ಮಲ್ಲಿಯ ಗುಣಮಟ್ಟದ ಶಿಕ್ಷಣವನ್ನು ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದರು.

ಆರಂಭದಲ್ಲಿ ಶಾಲೆಗೆ ಆಗಮಿಸಿದ ವಿದ್ಯಾರ್ಥಿನಿಯರಿಗೆ ಹೂಗುಚ್ಛ ನೀಡಿ, ಶಾಲಾ ಪ್ರಾರಂಭೋತ್ಸವಕ್ಕೆ ಸ್ವಾಗತಿಸಿಕೊಳ್ಳಲಾಯಿತು.

ಪಾಲಕರಾದ ಕವಿತಾ, ಶಿಕ್ಷಕ ರಾಮಣ್ಣ ಹಳ್ಳಿಕೇರಿ, ಸಿಬ್ಬಂದಿ, ಪಾಲಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-35-1304082873

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.