ಕಾರಟಗಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆ ರದ್ದು ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಎನ್ಎಸ್ಯುಐ ಪದಾಧಿಕಾರಿಗಳು, ಕಾರ್ಯಕರ್ತರು, ಪ್ರಮುಖರು ಬುಧವಾರ ಸಂಜೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪ್ರತಿಭಟಿಸಿದರು.

ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ವೃತ್ತದಿಂದ ನೂತನ ಬಸ್ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕನಕದಾಸ ವೃತ್ತದಲ್ಲಿ ಸಭೆ ನಡೆಸಿದರು. ಮೆರವಣಿಗೆಯುದ್ದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಹಾಕಿ, ಆಕ್ರೋಶ ವ್ಯಕ್ತಪಡಿಸಿದರು.

ಅನೇಕ ಪ್ರಮುಖರು, ಸಂಘಟನೆಯ ಪದಾಧಿಕಾರಿಗಳು, ವಿದ್ಯಾರ್ಥಿಗಳು ನೀಟ್ ಅಕ್ರಮ ವಿರೋಧಿಸಿ, ಕೇಂದ್ರದ ವಿರುದ್ಧ ಘೋಷಣೆ ಕೂಗಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಮಾತನಾಡಿ, ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಸಮರ್ಥವಾಗಿ ನಿರ್ವಹಿಸಲಾಗದೇ ಯುವ ಜನಾಂಗದ ಕನಸುಗಳನ್ನು ಭಗ್ನಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮಾನವ ಸಂಪನ್ಮೂಲ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣೇಗೌಡ ಮಾಲಿಪಾಟೀಲ, ಎನ್ಎಸ್ಯುಐ ಜಿಲ್ಲಾಧ್ಯಕ್ಷ ಶಿವಕುಮಾರ ತೆಕ್ಕಲಕೋಟೆ ಮಾತನಾಡಿದರು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯ ಸೋಮನಾಥ ದೊಡ್ಡಮನೆ, ಎನ್ಎಸ್ಯುಐ ಜಿಲ್ಲಾ ಕಾರ್ಯದರ್ಶಿ ಮಹೇಶ್ ಭೋವಿ, ಕನಕಗಿರಿ ಯುವ ಕಾಂಗ್ರೆಸ್ ಅಧ್ಯಕ್ಷ ದೇವರಾಜ ಕಟ್ಟಿಮನಿ, ತಾಲ್ಲೂಕು ಗ್ಯಾರಂಟಿ ಸಮಿತಿ ಸದಸ್ಯ ಚಂದ್ರಶೇಖರ ಉಪ್ಪಾರ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ, ಎನ್ಎಸ್ಯುಐ ತಾಲ್ಲೂಕಾಧ್ಯಕ್ಷ ಅಂಕಿತ್ ರೆಡ್ಡಿ, ದೇವರಾಜ ಕಟ್ಟಿಮನಿ ಸಹಿತ ಅನೇಕ ಯುವಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-35-687354453

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.