ಕಾರಟಗಿ: ‘ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ತಾಲ್ಲೂಕುಗಳಲ್ಲಿ ಖಾಸಗಿ ಶಾಲೆಗಳು ಅಧಿಕ ಶುಲ್ಕ ಪಡೆಯುವ ಮೂಲಕ ಶಾಲೆಗಳನ್ನು ಶಿಕ್ಷಣದ ಬದಲು ವಾಣಿಜ್ಯ ಕ್ಷೇತ್ರವನ್ನಾಗಿಸಿಕೊಂಡಿವೆ. ಸರ್ಕಾರದ ನಿಯಮಾವಳಿಯಂತೆ ಶುಲ್ಕ ಪಡೆಯುವಂತೆ ಕ್ರಮ ವಹಿಸಬೇಕು ಮತ್ತು ಶುಲ್ಕವನ್ನು ಶಾಲೆಯ ಬ್ಯಾಂಕ್ ಖಾತೆಗೆ ಪಾವತಿಸಿಕೊಳ್ಳುವಂತೆ ಆದೇಶ ಹೊರಡಿಸಬೇಕು’ ಎಂದು ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಯಲ್ಲಪ್ಪ ಕಟ್ಟಿಮನಿ ಒತ್ತಾಯಿಸಿದ್ದಾರೆ.

ಈ ಕುರಿತು ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಿದ ಅವರು, ‘ಆರ್ಥಿಕವಾಗಿ ಹಿಂದುಳಿದವರು ಗುಣಮಟ್ಟದ ಶಿಕ್ಷಣದ ಬಯಕೆಯಿಂದ ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸಿ ಪಡಿಪಾಟಲು ಅನುಭವಿಸುತ್ತಿದ್ದಾರೆ. ಪ್ರತಿವರ್ಷ ಶೇ30ರಿಂದ 40ರವರೆಗೆ ಹೆಚ್ಚಿಸುತ್ತಿವೆ. ಇದರ ಬಗ್ಗೆ ಕ್ರಮಕ್ಕೆ ಮುಂದಾಗಬೇಕು. ಶುಲ್ಕದ ವಿವರವನ್ನು ನಾಮಫಲಕದಲ್ಲಿ ಪ್ರದರ್ಶಿಸಲು ತುರ್ತು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

‘ಶಾಲೆಗಳಿಗೆ ಶಿಕ್ಷಣ ಸಂಯೋಜಕರು ಭೇಟಿ ನೀಡಿ ಸರ್ಕಾರದ ನಿಯಮಾವಳಿ ಪಾಲನೆಯಾಗುತ್ತಿರುವ ಬಗ್ಗೆ ಪರಿಶೀಲಿಸಿ, ವರದಿ ಪಡೆಯಬೇಕು. ಇಲ್ಲದಿದ್ದರೆ ಸಂಘಟನೆಯೊಂದಿಗೆ ಪಾಲಕರ ಜೊತೆಗೂಡಿ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಮಾಡಲಾಗುವುದು’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-35-1923546746

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.