ಕಾರ್ಕಳ: ಇಲ್ಲಿನ ಜೇಸಿ ಇಂಟರ್ನ್ಯಾಷನಲ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಶಾಲಾ ಪ್ರಾರಂಭೋತ್ಸವ ನಡೆಯಿತು. ಶಾರದಾ ದೇವಿ ವಿಗ್ರಹ ಮೆರವಣಿಗೆ, ಮಕ್ಕಳಿಗೆ ಆರತಿ ಬೆಳಗಿ ತಿಲಕವಿಟ್ಟು, ಚೆಂಡೆ, ಬ್ಯಾಂಡ್ ಸೆಟ್ನೊಂದಿಗೆ ಶಾಲೆಗೆ ಬರಮಾಡಿಕೊಳ್ಳಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಗುತ್ತಿಗೆದಾರ ವಾದಿರಾಜ ಶೆಟ್ಟಿ ಮಾತನಾಡಿ, ಜೇಸಿ ಶಾಲೆ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಒದಗಿಸುತ್ತದೆ ಎಂದರು

‘ಚರಿತ್ರೆ’ ಸಹ ಸಂಪಾದಕ ನಿತಿನ್ ಪೂಜಾರಿ, ಜೇಸಿ ಶಾಲೆ ಸಂಸ್ಕೃತಿ ಮತ್ತು ಉತ್ತಮ ಕಲಿಕೆಗೆ ಅಡಿಪಾಯ ಹಾಕಿದೆ. ಮಕ್ಕಳಿಗೆ ಬಡತನದ ಕುರಿತು ಕಲಿಸಿದರೆ ಜೀವನದಲ್ಲಿ ಸಹಾಯಕವಾಗುತ್ತದೆ ಎಂದರು.

ಅವಿನಾಶ್ ಪಿ. ಶೆಟ್ಟಿ ಮಾತನಾಡಿ, ತಂದೆ– ತಾಯಿ, ಶಿಕ್ಷಕರಿಗೆ ಗೌರವ ಕೊಡಿ. ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಮ್ಮ ಟ್ರಸ್ಟ್ ವತಿಯಿಂದ ಶಾಲಾ ವಾರ್ಷಿಕೋತ್ಸವ ಸಂದರ್ಭ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಹೇಳಿದರು.

ಶಾಲಾ ಅಧ್ಯಕ್ಷ ಜೇಸಿ ಚಿತ್ತರಂಜನ್ ಶೆಟ್ಟಿ ಅವರು ಮಾತನಾಡಿದರು. ಮುಖ್ಯಶಿಕ್ಷಕ ಶಂಕರನ್ ಪಿ, ಆಡಳಿತಾಧಿಕಾರಿ ಪ್ರಣೀತ್, ಕಾರ್ಕಳ ಎಜುಕೇಶನ್ ಸೊಸೈಟಿಯ ಜಯಕುಮಾರ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-28-145640332

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.