ಕಾರ್ಕಳ: ‘ನಮ್ಮ ಧನಾತ್ಮಕ ಆಲೋಚನೆಗಳು, ದೃಷ್ಟಿಕೋನವೇ ಜೀವನದ ದಾರಿದೀಪ’ ಎಂದು ರಾಜ್ಯ ಜಾನಪದ ಅಕಾಡೆಮಿ ಸದಸ್ಯ ಜೀವನ್ ಸಾಬ್ ವಾಲಿಕರ್ ಬಿನ್ನಾಳ್ ಹೇಳಿದರು.

ಇಲ್ಲಿನ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ಮಹಾಗಣಪತಿ ದೇವಸ್ಥಾನ, ಅಜೆಕಾರ್ ಪದ್ಮಗೋಪಾಲ್ ಎಜುಕೇಷನ್ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ‘ಮೌಲ್ಯಸುಧಾ’ ಮಾಲಿಕೆಯಲ್ಲಿ ‘ಜನಪದ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು’ ವಿಷಯ ಕುರಿತು ಅವರು ಉಪನ್ಯಾಸ ನೀಡಿದರು.

ಜನಪದವನ್ನು ನಮ್ಮ ಜೀವನದಿಂದ ಪ್ರತ್ಯೇಕಿಸಲು ಸಾಧ್ಯವಿಲ್ಲ. ಜನಪದರು ಹಾಡಿನ ಮೂಲಕ ನಮ್ಮ ಬದುಕನ್ನು ತಿದ್ದಿ ತೀಡಿದ್ದಾರೆ. ನಾವೆಲ್ಲರೂ ಒಂದು ಎನ್ನುವ ಭಾವವೇ ಜನಪದ. ಜನಪದರು ಓದದೆ ಬರೆಯದೆ ಕಾವ್ಯ ಕಟ್ಟುವ ಸಾಮರ್ಥ್ಯ ಹೊಂದಿದ್ದರು. ಜನಪದ ಉಳಿದರೆ ಕನ್ನಡ, ನಮ್ಮ ಸಂಸ್ಕೃತಿ ಗಟ್ಟಿಯಾಗಿ ಉಳಿಯುತ್ತದೆ ಎಂದರು.

ಅಜೆಕಾರ್ ಪದ್ಮಗೋಪಾಲ್ ಎಜುಕೇಷನ್ ಟ್ರಸ್ಟ್ನ ಟ್ರಸ್ಟಿ ಅನಿಲ್ ಕುಮಾರ್ ಜೈನ್, ಸಿಇಒ, ಪ್ರಾಂಶುಪಾಲ ದಿನೇಶ್ ಎಂ. ಕೊಡವೂರು, ಉಪ ಪ್ರಾಂಶುಪಾಲ ಸಾಹಿತ್ಯ ಭಾಗವಹಿಸಿದ್ದರು. ವಿದ್ಯಾರ್ಥಿನಿ ಗಾನ್ವಿಕಾ ಪ್ರಾರ್ಥಿಸಿದರು. ಉಪನ್ಯಾಸಕಿ ದರ್ಶಿನಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-28-2141547230

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.