ಕಾರ್ಕಳ: ಕರ್ನಾಟಕ ಜೈ ಭೀಮ್ ಯುವ ಸೇನಾ ಸೇವಾ ಟ್ರಸ್ಟ್ ಹಾಗೂ ಕರ್ನಾಟಕ ಯುವ ಸೇನೆ ವತಿಯಿಂದ ಇಲ್ಲಿನ ಬಂಡೀಮಠ ಬಸ್ ನಿಲ್ದಾಣದಲ್ಲಿ ಮೇ 24ರಂದು ಪರಿಶಿಷ್ಟ ಜಾತಿ ಹಾಗೂ ಪಂಗಡದ ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಬ್ಯಾಗ್, ಕೊಡೆ ಹಾಗೂ ನೋಟ್ ಪುಸ್ತಕಗಳ ವಿತರಣೆ, ಅನಾರೋಗ್ಯ ಪೀಡಿತರಿಗೆ ಧನಸಹಾಯ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಯುವ ಸೇನೆಯ ರಾಜ್ಯಾಧ್ಯಕ್ಷ ಎಸ್.ಪಿ ಅಶೋಕ್ ಕುಮಾರ್ ಹೇಳಿದರು.

ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು. ಕಾರ್ಯಕ್ರಮವನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಉದ್ಘಾಟಿಸುವರು ಎಂದರು.

ಜಿಲ್ಲಾಧ್ಯಕ್ಷ ರಮೇಶ್.ಬಿ, ಲೋಕೇಶ್ ಎಂ.ಎಸ್., ಕೃಷ್ಣ ಎಸ್.ಕೆ., ಮಹಿಳಾ ಘಟಕದ ಶಾಂತಿ ನಿಟ್ಟೆ, ವಾಣಿ ಜಾರ್ಕಳ, ರಮ್ಯಾ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-28-1560026051

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.