ಕಾರ್ಕಳ: ‘ವಿದ್ಯಾರ್ಥಿಗಳು ಜ್ಞಾನವೃದ್ಧಿಗಾಗಿ ಸಮಾಜಕ್ಕೆ ಉಪಯುಕ್ತವಾಗುವಂತಹ ಪ್ರಾಜೆಕ್ಟ್ಗಳನ್ನು ಸಿದ್ಧಗೊಳಿಸಬೇಕು’ ಎಂದು ಮಣಿಪಾಲದ ಸ್ಕೂಲ್ ಆಫ್ ಕಂಪ್ಯೂಟರ್ ಎಂಜಿನಿಯರಿಂಗ್ನ ಪ್ರಾಧ್ಯಾಪಕ ಕೃಷ್ಣಮೂರ್ತಿ ಮಕ್ಕಿತ್ತಾಯ ಹೇಳಿದರು.

ತಾಲ್ಲೂಕಿನ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂಘ ‘ವೆನಮಿತಾ’ದ ಸಹಯೋಗದಲ್ಲಿ ಆಯೋಜಿಸಿದ್ದ ಅಂತಿಮ ವರ್ಷದ ಯುಜಿ ಪ್ರಾಜೆಕ್ಟ್ಸ್ಗಳ ವಾರ್ಷಿಕ ಪ್ರದರ್ಶನ ಎಕ್ಸ್ಪ್ರೊವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂತಹ ಕಾರ್ಯಕ್ರಮ ಯೋಜನೆ ಪ್ರದರ್ಶಿಸುವ ಮತ್ತು ತಾಂತ್ರಿಕ ನಾವೀನ್ಯತೆ ಉತ್ತೇಜಿಸುವ ಗುರಿ ಹೊಂದಿದ್ದು, ಶೈಕ್ಷಣಿಕ ಜ್ಞಾನ ಮತ್ತು ಉದ್ಯಮ ಕೌಶಲಗಳ ನಡುವಿನ ಅಂತರ ಕಡಿಮೆ ಮಾಡುವ ಮಹತ್ವದ ಚಿಂತನೆಯನ್ನು ಪ್ರತಿಪಾದಿಸುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ನಿರಂಜನ್ ಎನ್. ಚಿಪ್ಲೂಣ್ಕರ್ ಮಾತನಾಡಿದರು.

ಪ್ರದರ್ಶನದಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ವಿವಿಧ ಎಂಜಿನಿಯರಿಂಗ್ ವಿಭಾಗಗಳ 360 ಯೋಜನೆಗಳನ್ನು ಪ್ರದರ್ಶಿಸಲಾಯಿತು. ಇದೇ ಸಂದರ್ಭದಲ್ಲಿ ಎಕ್ಸ್ ಪ್ರೋ ಆಬ್ಸ್ಟ್ರ್ಯಾಕ್ಟ್ ವಾಲ್ಯೂಮ್ ಅನ್ನು ಬಿಡುಗಡೆಗೊಳಿಸಲಾಯಿತು. ಸಮಾರೋಪದಲ್ಲಿ ಪ್ರತಿ ವಿಭಾಗದಲ್ಲಿ ಪ್ರದರ್ಶನಗೊಂಡ ಉತ್ತಮ ಪ್ರಾಜೆಕ್ಟ್ಗಳಿಗೆ ವಿನಮಿತಾ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಬಹುಮಾನ ವಿತರಿಸಲಾಯಿತು.

ಎಕ್ಸ್ಪ್ರೊ ಸಂಯೋಜಕಿ ನಯನಾ ಶೆಟ್ಟಿ ಸ್ವಾಗತಿಸಿದರು. ಬಯೊಟೆಕ್ನಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸ್ನೇಹಾ ನಾಯಕ್ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-28-251052378

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.