ಕಾರ್ಕಳ: ಇಲ್ಲಿನ ಗಾಂಧಿ ಮೈದಾನ ಸಮೀಪದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಶಾಲೆಯ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮಕ್ಕಳಿಗಾಗಿ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರ ಉದ್ಘಾಟಿಸಿದ ಅತ್ತೂರು ಸೇಂಟ್ ಲಾರೆನ್ಸ್ ಬೆಸಿಲಿಕಾದ ಸಹಾಯಕ ಧರ್ಮಗುರು ರಾಬಿನ್ ಜಾಯ್ಸನ್ ಮಾತನಾಡಿ ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ಕೌಶಲವನ್ನು ಬೆಳೆಸಲು ಇಂತಹ ಶಿಬಿರಗಳು ಅಗತ್ಯ ಎಂದರು.

ಮಕ್ಕಳು ಜೀವನದಲ್ಲಿ ಸಿಗುವ ಎಲ್ಲ ಅವಕಾಶಗಳನ್ನು ಬಳಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕಾರ್ಕಳ ಯಕ್ಷರಂಗಾಯಣದ ನಿರ್ದೇಶಕ ವೆಂಕಟ್ರಮಣ ಐತಾಳ್ ಹೇಳಿದರು. ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ ಅಧ್ಯಕ್ಷತೆ ವಹಿಸಿದ್ದರು.

ಶಿಬಿರದಲ್ಲಿ ಧ್ಯಾನ, ಯೋಗ, ಏರೋಬಿಕ್ಸ್, ಮ್ಯಾಜಿಕ್ ಷೋ, ಅಡುಗೆ ಮನೆ ಚಟುವಟಿಕೆ, ಬುಟ್ಟಿ ಹೆಣೆಯುವ ಪ್ರಾತ್ಯಕ್ಷಿಕೆ, ಕರಕುಶಲ ವಸ್ತು ತಯಾರಿ, ಸಂಗೀತದ ಮೋಜು, ರಂಗಕಲೆ, ಸಾಹಸ ಕ್ರೀಡೆ, ಆರೋಗ್ಯ ತಪಾಸಣೆ, ಹೊರಸಂಚಾರ ಹಾಗೂ ಪುರಾತನ ಕಾಲದ ವಸ್ತುಗಳ ಪ್ರದರ್ಶನ ಇದೆ.

ಆಪ್ತ ಸಮಾಲೋಚಕಿ ಸಿಸ್ಟರ್ ಶಾಲೆಟ್ ಸಿಕ್ವೇರಾ, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಲಕ್ಷ್ಮೀನಾರಾಯಣ ಕಾಮತ್, ಪ್ರೌಢಶಾಲಾ ಮುಖ್ಯಶಿಕ್ಷಕಿ ಜ್ಯೋತ್ಸ್ನಾ, ಸ್ನೇಹಲತಾ, ಆಡಳಿತಾಧಿಕಾರಿ ಕಿರಣ್ ಕ್ರಾಸ್ತ, ಕಾಲೇಜು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಯಾನಂದ, ಪ್ರಾಥಮಿಕ ವಿಭಾಗದ ಅಧ್ಯಕ್ಷ ಉದಯರವಿ ಇದ್ದರು. ಜಯಲಕ್ಷ್ಮಿ ಸ್ವಾಗತಿಸಿದರು. ವಿಜೇತಾ ಜೈನ್ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-28-615473733

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.