ಹೊಸ ವರ್ಷದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಒಂದಷ್ಟು ಹೊಸ ನಿಯಮಗಳ ಜಾರಿ ಜತೆಗೆ, ಮಕ್ಕಳ ಕಲಿಕೆಗೆ ಬೇಕಾದ ಸವಲತ್ತುಗಳನ್ನು ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ.

ಹಾಗಾದರೆ 2026ರಲ್ಲಿ ವಿದ್ಯಾರ್ಥಿಗಳಿಗೆ ಏನೆಲ್ಲಾ ಹೊಸ ಸೌಲಭ್ಯಗಳು ಸಿಗಲಿವೆ, ಸಿಬ್ಬಂದಿ, ಶಿಕ್ಷಕರಿಗೆ ಸಂಬಂಧಿಸಿದಂತೆ ಏನೆಲ್ಲಾ ಬದಲಾವಣೆಗಳಾಗಲಿವೆ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.
.ವಾರದ ವಿಶೇಷ | ರಾಜ್ಯ ಶಿಕ್ಷಣ ನೀತಿ ಹೇಳುವುದೇನು?.ರಾಜ್ಯದಲ್ಲಿ ಹೋಬಳಿಗೊಂದು ‘ಗಾಂಧಿ ಶಾಲೆ’: 2025–26ನೇ ಸಾಲಿನ ಬಜೆಟ್ನಲ್ಲೇ ಘೋಷಣೆ.
ದ್ವಿತೀಯ ಪಿಯುಸಿವರೆಗೂ ಉಚಿತ ಪಠ್ಯಪುಸ್ತಕ

2026–27 ಸರ್ಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜು, ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು ಉಚಿತವಾಗಿ ಸಿಗಲಿವೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಈ ಯೋಜನೆ ಅನುಷ್ಠಾನಗೊಳಿಸಲು ಶಾಲಾ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಪ್ರಥಮ ಹಾಗೂ ದ್ವಿತೀಯ ಪಿಯುಸಿಯಲ್ಲಿ ಕಲಿಯುತ್ತಿರುವ ಸುಮಾರು 15 ಲಕ್ಷ ವಿದ್ಯಾರ್ಥಿಗಳಿಗೆ ಇದರಿಂದ ಪ್ರಯೋಜನವಾಗಲಿದೆ.

ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಲು ಹಾಗೂ ಗುಣಮಟ್ಟದ ಶಿಕ್ಷಣ ನೀಡಲು ಶಾಲಾ ಶಿಕ್ಷಣ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಇದುವರೆಗೂ 1ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಉಚಿತ ಪಠ್ಯಪುಸ್ತಕ ಯೋಜನೆಯನ್ನು ದ್ವಿತೀಯ ಪಿಯುಸಿವರೆಗೂ ವಿಸ್ತರಿಸಲಾಗುತ್ತಿದೆ.

ಪ್ರಸ್ತುತ ರಾಜ್ಯದಲ್ಲಿ 1,319 ಸರ್ಕಾರಿ, 815 ಅನುದಾನಿತ ಪದವಿಪೂರ್ವ ಕಾಲೇಜುಗಳು ಇವೆ. ಪ್ರಥಮ ಹಾಗೂ ದ್ವಿತೀಯ ವರ್ಷ ಸೇರಿ ಸರ್ಕಾರಿ ಕಾಲೇಜುಗಳಲ್ಲಿ 13.17 ಲಕ್ಷ ಹಾಗೂ ಅನುದಾನಿತ ಕಾಲೇಜುಗಳಲ್ಲಿ 1.91 ಲಕ್ಷ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಒಟ್ಟು 34 ವಿಷಯಗಳನ್ನು ಬೋಧಿಸಲಾಗುತ್ತಿದೆ.

ಪದವಿಪೂರ್ವ ಕಾಲೇಜುಗಳಿಗೆ 2026–27ನೇ ಸಾಲಿನಿಂದ ಉಚಿತ ಪಠ್ಯಪುಸ್ತಕ ವಿತರಿಸುವ ಯೋಜನೆ ಅನುಷ್ಠಾನಕ್ಕೆ ತರುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಖಚಿತಪಡಿಸಿದ್ದಾರೆ.
.ವಿಶ್ಲೇಷಣೆ: ರಾಜ್ಯ ಶಿಕ್ಷಣ ನೀತಿ ಏಕೆ ಬೇಕು?.ಎಲ್ಕೆಜಿ, ಪಿಯು ಮಕ್ಕಳಿಗೂ ಬಿಸಿಯೂಟ; ಮಧು ಬಂಗಾರಪ್ಪ.
11 ಮತ್ತು 12ನೇ ತರಗತಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ

ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಯ 11 ಮತ್ತು 12ನೇ ತರಗತಿ ಮಕ್ಕಳಿಗೆ 2026–27ನೇ ಸಾಲಿನಿಂದ ವಿಸ್ತರಿಸಲಾಗುತ್ತಿದೆ.
.ವಿಶ್ಲೇಷಣೆ | ಶಾಲಾ ಶಿಕ್ಷಣ: ಇಕ್ಕಟ್ಟು–ಬಿಕ್ಕಟ್ಟು.
ಶಾಲಾ ಸಿಬ್ಬಂದಿಗೆ ಆರೋಗ್ಯ ಸಂಜೀವಿನಿ ಯೋಜನೆ

ಸರ್ಕಾರಿ ನೌಕರರಿಗೆ ಜಾರಿಗೆ ತಂದಿರುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲಾ–ಕಾಲೇಜು ಸಿಬ್ಬಂದಿಗೂ 2026–27ನೇ ಸಾಲಿನಿಂದ ಅನ್ವಯಿಸುವ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶಾಲಾ ಶಿಕ್ಷಕರ ಬಡ್ತಿ

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿ ಕುರಿತು ಈಗಾಗಲೇ ಸಂಪುಟ ಸಮ್ಮತಿ ನೀಡಿದೆ. ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ 2015 ರಿಂದ 2020ರವರೆಗೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದ್ದು, ಮುಂದಿನ ಶೈಕ್ಷಣಿಕ ಅವಧಿಯ ಒಳಗೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದೆ.

ಸರ್ಕಾರಿ ಶಾಲೆಗಳು ಮೇಲ್ದರ್ಜೆಗೆ

2026–27ನೇ ಸಾಲಿನ ಆರಂಭದ ವೇಳೆಗೆ 900 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಬಡವರು, ಪರಶಿಷ್ಟರು, ಹಿಂದುಳಿದ ವರ್ಗಗಳ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿದ್ದು, ಅವರಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎನ್ನುವುದು ಸರ್ಕಾರದ ಉದ್ದೇಶ. ಅದಕ್ಕಾಗಿ ಕೆಪಿಎಸ್ ಬಲಪಡಿಸಲಾಗುತ್ತಿದೆ.

ದೂರದ ಗ್ರಾಮಗಳಿಂದ ಬರುವ ಮಕ್ಕಳಿಗೆ ಬಿಸಿಯೂಟ, ಉಚಿತ ಪಠ್ಯ ಜತೆಗೆ ಬಸ್ ಸೌಕರ್ಯವನ್ನೂ ಕಲ್ಪಿಸಲಾಗುತ್ತದೆ. ಅದರಲ್ಲಿ ನಿಗದಿಪಡಿಸಿರುವ ಗುಣಮಟ್ಟದ ನಿಯಮದಂತೆ ಪ್ರತಿ ಶಾಲೆಯಲ್ಲೂ ಕನಿಷ್ಠ 1,200 ವಿದ್ಯಾರ್ಥಿಗಳಿಗೆ ಅಗತ್ಯವಿರುವ ಶೈಕ್ಷಣಿಕ ಮತ್ತು ಮೂಲ ಸೌಕರ್ಯಗಳನ್ನು ಒದಗಿಸಲಾಗುತ್ತದೆ

ಉತ್ತಮ ಕಲಿಕೆ, ಉಜ್ವಲ ಭವಿಷ್ಯ ಎಂಬುದು ಧ್ಯೇಯ ವಾಕ್ಯವಾಗಿದ್ದು, ಪ್ರತಿ ಮಗುವೂ ಶಾಲೆಯಲ್ಲಿರಬೇಕು ಮತ್ತು ಚೆನ್ನಾಗಿ ಕಲಿಯಬೇಕು ಎಂಬ ಆಶಯದಿಂದ ರಾಜ್ಯದ ಎಲ್ಲಾ ಕರ್ನಾಟಕ ಪಬ್ಲಿಕ್ ಶಾಲೆಗಳು ಏಕರೂಪದ ನೀತಿಯನ್ನು ಪಾಲಿಸುವಂತೆ 'ಕರ್ನಾಟಕ ಪಬ್ಲಿಕ್ ಶಾಲಾ ಮಾನದಂಡ ಕೈಪಿಡಿ’ ಸಿದ್ಧಪಡಿಸಲಾಗಿದೆ.
.ಶಾಲಾ ಶಿಕ್ಷಣ: ಗ್ರೂಪ್ ಸಿ,ಡಿ ವರ್ಗಾವಣೆಗೆ ಕೌನ್ಸೆಲಿಂಗ್.
ಶಾಲೆಗಳ ಅಭಿವೃದ್ಧಿಗೆ ಸಿಎಸ್ಆರ್ ಬಳಕೆ

ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಪೊರೇಟ್ ಕಂಪನಿಗಳು ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು (ಸಿಎಸ್ಆರ್) ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬಳಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿದೆ.

ಸಿಎಸ್ಆರ್ ನಿಧಿ ಬಳಕೆ ಕುರಿತು ರಾಜ್ಯ ಸರ್ಕಾರ ಕರಡು ನೀತಿ ರೂಪಿಸಿದ್ದು, ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಸೇರಿದಂತೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ, ಹೊಸ ಸರ್ಕಾರಿ ಶಾಲೆಗಳ ಸ್ಥಾಪನೆ, ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಬಳಕೆ ಮಾಡಿಕೊಳ್ಳಲು ಸಾಧ್ಯವಾಗಲಿದೆ. ಸಿಎಸ್ಆರ್ ನಿಧಿಯನ್ನು ಶಾಲಾ ಶಿಕ್ಷಣದ ಅಭಿವೃದ್ಧಿಗೆ ಬಳಸಿಕೊಳ್ಳುವುದು, ಪ್ರತಿ ಪಂಚಾಯಿತಿ ಮಟ್ಟದಲ್ಲಿ ಕನಿಷ್ಠ ಒಂದು ಕೆಪಿಎಸ್ ಶಾಲೆ ಆರಂಭಿಸುವುದು ನೀತಿಯ ಪ್ರಮುಖ ಉದ್ದೇಶವಾಗಿದೆ.

ರಾಜ್ಯದಲ್ಲಿನ ವಿವಿಧ ಕಾರ್ಪೋರೇಟ್ ಕಂಪನಿಗಳಿಂದ ವಾರ್ಷಿಕವಾಗಿ ₹8,500 ಕೋಟಿ ಸಿಎಸ್ಆರ್ ನಿಧಿಯಡಿ ಲಭ್ಯವಿದೆ. ಆದರೆ, ಬಹುತೇಕ ಕಂಪನಿಗಳು ಈ ಮೊತ್ತವನ್ನು ಬೇರೆ ರಾಜ್ಯಗಳಿಗೂ ಖರ್ಚು ಮಾಡುತ್ತಿವೆ. ರಾಜ್ಯದಲ್ಲೇ ಬಳಕೆ ಮಾಡುವ ಕುರಿತು ಇದುವರೆಗೂ ಯಾವುದೇ ನೀತಿ ಅಸ್ತಿತ್ವದಲ್ಲಿಲ್ಲ. ಹೊಸ ನೀತಿ ಅಂಗೀಕಾರವಾದರೆ ಸಿಎಸ್ಆರ್ ನಿಧಿಯನ್ನು ಕಂಪನಿಗಳು ಕಡ್ಡಾಯವಾಗಿ ಕರ್ನಾಟಕಕ್ಕೇ ಖರ್ಚು ಮಾಡಬೇಕಾಗುತ್ತದೆ.
.ಶಾಲೆಗಳ ಅಭಿವೃದ್ಧಿಗೆ ಇನ್ನು ‘ಸಿಎಸ್ಆರ್ ನಿಧಿ’: ಡಿ.ಕೆ.ಶಿವಕುಮಾರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.