ಶ್ರೀರಂಗಪಟ್ಟಣ: ‘ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಸುಧಾರಣೆ ತರುವ ಉದ್ದೇಶದಿಂದ ರಾಜ್ಯ ಸರ್ಕಾರ ರಾಜ್ಯದಲ್ಲಿ ಒಂದು ಸಾವಿರ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲೆಗಳನ್ನು ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭಿಸುತ್ತಿದೆ’ ಎಂದು ಶಾಸಕ ಹಾಗೂ ಸೆಸ್ಕ್ ಅಧ್ಯಕ್ಷ ರಮೇಶ ಬಂಡಿಸಿದ್ದೇಗೌಡ ತಿಳಿಸಿದರು.

ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಸೋಮವಾರ ಏರ್ಪಡಿಸಿದ್ದ ಶಾಲಾ ಪ್ರಾರಂಭೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ‘ನಮ್ಮ ವಿಧಾನಸಭಾ ಕ್ಷೇತ್ರದ ಅರಕೆರೆಯಲ್ಲಿ ಕೆಪಿಎಸ್ ಶಾಲೆ ನಡೆಯುತ್ತಿದೆ. ಸೂನಗಹಳ್ಳಿ ಮಹದೇವಪುರ ಮತ್ತು ಬೆಳಗೊಳದಲ್ಲಿ ಈ ವರ್ಷದಿಂದ ನೂತನ ಕೆಪಿಎಸ್ ಶಾಲೆಗಳು ಶುರುವಾಗುತ್ತಿವೆ. ಈ ಶಾಲೆಗಳಲ್ಲಿ ಶಾಲಾ ಪೂರ್ವ ತರಗತಿಗಳು ಆರಂಭವಾಗಲಿದ್ದು, ಅಂಗ್ಲ ಮಾಧ್ಯಮದಲ್ಲಿ ಕೂಡ ಶಿಕ್ಷಣ ನೀಡಲಾಗುತ್ತದೆ. ಕೆಪಿಎಸ್ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗೆ ಸರಿಸಮನಾಗಿ ಗುಣಮಟ್ಟದ ಶಿಕ್ಷಣ ಸಿಗಲಿದೆ’ ಎಂದು ಹೇಳಿದರು.

‘ಮಂಡ್ಯ ಜಿಲ್ಲೆ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ, 2025–26ನೇ ಸಾಲಿನಲ್ಲಿ ರಾಜ್ಯ ಮಟ್ಟದಲ್ಲಿ 5ನೇ ಸ್ಥಾನ ಪಡೆದಿದೆ. ಪ್ರಥಮ ಸ್ಥಾನ ಪಡೆಯಲು ತಾಲ್ಲೂಕಿನ ಕೊಡುಗೆ ಮುಖ್ಯ. ಎಲ್ಲ ಶಾಲೆಗಳಲ್ಲಿ ಶೇ 100 ಫಲಿತಾಂಶ ಪಡೆಯಲು ಇಲಾಖೆಯ ಅಧಿಕಾರಿಗಳು ಮತ್ತು ಶಿಕ್ಷಕರು ಈಗಿನಿಂದಲೇ ಸಿದ್ದತೆ ಆರಂಭಿಸಬೇಕು’ ಎಂದು ಸಲಹೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಆರ್. ಚಂದ್ರಶೇಖರ್ ಮಾತನಾಡಿ, ‘2025–26ನೇ ಸಾಲಿನಲ್ಲಿ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಶೇ.95.4 ಫಲಿತಾಂಶ ಬಂದಿದೆ. ಈ ಪ್ರಮಾಣವನ್ನು ಮತ್ತಷ್ಟು ಉತ್ತಮಗೊಳಿಸಲು ಶಿಕ್ಷಕರು ಬದ್ದತೆಯಿಂದ ಕರ್ತವ್ಯ ನಿರ್ವಹಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣವನ್ನು ಹೆಚ್ಚಿಸಲು ಶಾಲಾಭಿವೃದ್ಧಿ ಸಮಿತಿಯ ಜತೆಗೂಡಿ ಆಸಕ್ತಿಯಿಂದ ಕೆಲಸ ಮಾಡಬೇಕು’ ಎಂದು ತಿಳಿಸಿದರು.

ಶಿಕ್ಷಣ ಸಮನ್ವಯಾಧಿಕಾರಿ ಪ್ರಭಾ ನಂಜಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಸಮಿತಿ ಅಧ್ಯಕ್ಷ ಎಂ.ಎಲ್. ದಿನೇಶ್, ಶಿಕ್ಷಣ ತಜ್ಞ ಡಾ.ಬಿ. ಸುಜಯಕುಮಾರ್, ಪುರಸಭೆ ಮಾಜಿ ಸದಸ್ಯರಾದ ಕೃಷ್ಣಪ್ಪ, ಗಂಜಾಂ ಶಿವು, ಶಿಕ್ಷಣ ಸಂಯೋಜಕಿ ಬಿ.ಕೆ. ಪ್ರತಿಮಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಸಮಿತಿ ಅಧ್ಯಕ್ಷ ಡಿ.ಎನ್. ಲೋಕೇಶ್, ವಿದ್ಯಾ ಇಲಾಖಾ ನೌಕರರ ಸಹಕಾರ ಸಂಘದ ಅಧ್ಯಕ್ಷ ಎಚ್.ಟಿ. ರಾಜಶೇಖರ್, ಪ್ರಭಾರ ಉಪ ಪ್ರಾಂಶುಪಾಲೆ ಸಪ್ನ, ಶಿವಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-40-1478172

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.