ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5,8,9ನೇ ತರಗತಿ ಮೌಲ್ಯಮಾಪನದಲ್ಲಿ ದೋಷ: ಆರೋಪ

Published 5 ಏಪ್ರಿಲ್ 2024, 15:19 IST
Last Updated 5 ಏಪ್ರಿಲ್ 2024, 15:19 IST
ಅಕ್ಷರ ಗಾತ್ರ

ಬೆಂಗಳೂರು: 2023–24ನೇ ಸಾಲಿನ 5, 8 ಹಾಗೂ 9ನೇ ತರಗತಿ ಸಂಕಲನಾತ್ಮಕ ಮೌಲ್ಯಾಂಕನ (ಎಸ್‌ಎ–2) ಪೂರ್ಣಗೊಂಡಿದ್ದು, ಮೌಲ್ಯಮಾಪನದಲ್ಲಿ ಹಲವು ದೋಷಗಳು ಉಳಿದುಕೊಂಡಿವೆ ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್‌ ಆರೋಪಿಸಿದ್ದಾರೆ.

ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರೌಢಶಾಲಾ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡಿಸಲಾಗಿದೆ. ಸರಿ ಉತ್ತರಗಳಿಗೂ ಅಂಕ ಕಡಿತ ಮಾಡಲಾಗಿದೆ. ಕೆಲ ಬಂಡಲ್‌ಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನವೇ ಮಾಡಿಲ್ಲ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಅಂಕಗಳು ಬಂದಿವೆ.  8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಸಾಕಷ್ಟು ಅನ್ಯಾಯವಾಗಿದೆ ಎಂದು ಹಲವು ಶಿಕ್ಷಣ ಸಂಸ್ಥೆಗಳು ಮಾಹಿತಿ ನೀಡಿವೆ ಎಂದಿದ್ದಾರೆ.

‘ಗೊಂದಲಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಅವರ ಪ್ರತಿಕ್ರಿಯೆಗೆ ಕಾಯುತ್ತಿದ್ದೇವೆ’ ಎಂದು ಹೇಳಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT