ಚಿಂತಾಮಣಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು, ನೌಕರರ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ.

ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳು https:powermedia.info ಮೂಲಕ ಇದೇ 25ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದು ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಆರ್. ಅಶೋಕಕುಮಾರ್ ತಿಳಿಸಿದ್ದಾರೆ.

ವಿದ್ಯಾರ್ಥಿಯ ಪಾಸ್ ಪೋರ್ಟ್ ಭಾವಚಿತ್ರ, ದೃಢೀಕೃತ ಅಂಕಪಟ್ಟಿ, ಇಲಾಖಾ ಮುಖ್ಯಸ್ಥರು ಮತ್ತು ತಾಲ್ಲೂಕು ಘಟಕದ ಅಧ್ಯಕ್ಷರ ದೃಢೀಕರಣ ಪತ್ರವನ್ನು ನಿಗದಿತ ಜೆಪಿಜಿ ಫಾರ್ಮೆಟ್ನಲ್ಲಿ ಅಪ್ಲೋಡ್ ಮಾಡಬೇಕು.

ವಿದ್ಯಾರ್ಥಿ ತಂದೆ-ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಕಾಯಂ ನೌಕರರಾಗಿರಬೇಕು. ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆ ನೌಕರರ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-16-1877925674

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.