ಬೆಂಗಳೂರು: ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯು (ನೀಟ್) ಭಾನುವಾರ ಸುಗಮವಾಗಿ ನಡೆಯಿತು. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಆಯೋಜಿಸಿದ್ದ ನೀಟ್ ಪರೀಕ್ಷೆಗೆ ರಾಜ್ಯದಲ್ಲಿ ಸುಮಾರು 1.45 ಲಕ್ಷ ವಿದ್ಯಾರ್ಥಿಗಳು ಹಾಜರಾದರು.

ಇಬ್ಬರು ವಿದ್ಯಾರ್ಥಿನಿಯರು ನಗರದಲ್ಲಿನ ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದಿದ್ದರಿಂದ ಪರೀಕ್ಷೆ ಬರೆಯಲು ಅವಕಾಶ ಸಿಗಲಿಲ್ಲ.

ಮಧ್ಯಾಹ್ನ 2 ಗಂಟೆಗೆ ಪರೀಕ್ಷೆ ಆರಂಭವಾಯಿತು. 1.30ರ ಒಳಗೆ ಪರೀಕ್ಷಾ ಕೇಂದ್ರದಲ್ಲಿ ಇರಬೇಕು ಎಂದು ಸೂಚಿಸಲಾಗಿತ್ತು. ಆದರೆ, ಸಂಚಾರ ದಟ್ಟಣೆಯಿಂದಾಗಿ ವಿದ್ಯಾರ್ಥಿನಿಯೊಬ್ಬರು 20 ನಿಮಿಷ ತಡವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದರು. ಇದರಿಂದಾಗಿ ಆರ್.ಸಿ.ಕಾಲೇಜಿನ ಪರೀಕ್ಷಾ ಕೇಂದ್ರದ ಸಿಬ್ಬಂದಿ ಒಳಗೆ ಬಿಡಲಿಲ್ಲ. ಪರೀಕ್ಷೆ ಬರೆಯಲು ಅವಕಾಶ ಸಿಗದ ಕಾರಣ ವಿದ್ಯಾರ್ಥಿನಿ ಕಣ್ಣೀರು ಹಾಕಿದಳು.

‘ಅತ್ತಿಬೆಲೆಯಿಂದ ಪರೀಕ್ಷೆ ಬರೆಯಲು ಬಂದಿದ್ದೇನೆ. ಸಂಚಾರ ದಟ್ಟಣೆ ಇದ್ದ ಕಾರಣ ತಡವಾಯಿತು. ಸಮಯ ಮುಗಿದಿರುವ ಕಾರಣ ನಿಯಮಾವಳಿ ಪ್ರಕಾರ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸಿಬ್ಬಂದಿ ಹೇಳಿದರು. ವರ್ಷವಿಡೀ ಕಷ್ಟಪಟ್ಟು ಓದಿದ್ದೇನೆ. ಆದರೆ, ಪರೀಕ್ಷೆ ಬರೆಯಲು ಸಾಧ್ಯವಾಗಲಿಲ್ಲ’ ಎಂದು ವಿದ್ಯಾರ್ಥಿನಿ ಬೇಸರ ವ್ಯಕ್ತಪಡಿಸಿದಳು.

ಮತ್ತೊಬ್ಬ ವಿದ್ಯಾರ್ಥಿನಿ ಬೇಗನೇ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದರು. ಆದರೆ, ಭಾವಚಿತ್ರ ತೆಗೆಸಲು ಮೆಜೆಸ್ಟಿಕ್ಗೆ ತೆರಳಿದ್ದರು. ಅಲ್ಲಿಂದ ವಾಪಸ್ ಬರುವ ವೇಳೆಗೆ ಸಮಯ ಮೀರಿದ್ದರಿಂದ ಪರೀಕ್ಷಾ ಕೇಂದ್ರದ ಒಳಗೆ ಬಿಡಲಿಲ್ಲ.

‘ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆವರೆಗೆ ಪರೀಕ್ಷೆ ನಡೆಯಿತು. ಮಧ್ಯಾಹ್ನ 1.30ರ ಒಳಗೆ ಪರೀಕ್ಷಾ ಕೇಂದ್ರದಲ್ಲಿ ಇರಬೇಕು ಎಂದು ಮೊದಲೇ ಸೂಚಿಸಲಾಗಿತ್ತು. ಆದರೂ, ತಡವಾಗಿ ಬಂದಿದ್ದಾರೆ. ಹೀಗಾಗಿ ಒಳಗೆ ಬಿಟ್ಟಿಲ್ಲ. ನಮ್ಮ ಸಿಬ್ಬಂದಿಯ ಕಡೆಯಿಂದ ಯಾವುದೇ ಲೋಪ ಆಗಿಲ್ಲ’ ಎಂದು ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ತಿಳಿಸಿದರು.

‘ಜೀವವಿಜ್ಞಾನ ವಿಷಯದಲ್ಲಿ ಪ್ರಶ್ನೆಗಳು ಸುಲಭವಾಗಿದ್ದವು. ಆದರೆ, ಭೌತವಿಜ್ಞಾನ ಮತ್ತು ರಸಾಯನ ವಿಜ್ಞಾನ ವಿಷಯದ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸ್ವಲ್ಪ ಕಷ್ಟವಾಯಿತು’ ಎಂದು ವಿದ್ಯಾರ್ಥಿಯೊಬ್ಬರು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-51-1859675056

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.