ಕಾರವಾರ: ‘ಅಸ್ಪೃಶ್ಯತೆ ಅನುಭವಿಸಿದ್ದ ಕಾರಣಕ್ಕೆ ಆ ಪಿಡುಗು ಹೋಗಲಾಡಿಸಲು ದೇಶದಲ್ಲಿ ಪರಿಣಾಮಕಾರಿ ಕಾರ್ಯಕ್ರಮಗಳನ್ನು ಡಾ.ಬಾಬು ಜಗಜೀವನ ರಾಂ ಅನುಷ್ಠಾನಕ್ಕೆ ತಂದರು. ಸಮಾನತೆಯ ಅವರ ಧ್ಯೇಯ ಈಡೇರಿಸುವ ಸಂಕಲ್ಪವನ್ನು ಸಮಾಜ ಮಾಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ನಡೆದ ಬಾಬು ಜಗಜೀವನ ರಾಂ ಅವರ 119ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಶಿಕ್ಷಣ ಪಡೆಯುವುದರಿಂದ ಸಮಾಜದಲ್ಲಿ ಸ್ಥಾನಮಾನ ಪಡೆಯಬಹುದು. ಸಮಾಜದ ಎಲ್ಲ ವರ್ಗಗಳು ಎಲ್ಲ ಕ್ಷೇತ್ರದಲ್ಲಿ ಸಮಾನ ಅವಕಾಶ ಪಡೆಯಬಹುದು ಎಂದು ಜಗಜೀವನ ರಾಂ ಪ್ರತಿಪಾದಿಸಿದ್ದರು’ ಎಂದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಎಸ್.ಅಲ್ಲಾಭಕ್ಷ್ ಮಾತನಾಡಿ, ‘ಕಾರ್ಮಿಕರ ಹಿತ ರಕ್ಷಣೆಗಾಗಿ ಕನಿಷ್ಠ ವೇತನ ಕಾಯ್ದೆ, ದೇಶದಾದ್ಯಂತ ಕೃಷಿ ವಿಜ್ಞಾನ ಕೇಂದ್ರಗಳ ಸ್ಥಾಪನೆ ಸೇರಿದಂತೆ ಹಲವು ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ಜಗಜೀವನ ರಾಂ ಅನುಷ್ಠಾನಗೊಳಿಸಿದ್ದರು’ ಎಂದರು.

ಉಪನ್ಯಾಸ ನೀಡಿದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಡಿ.ಮನೋಜೆ, ‘ಸ್ವಾತಂತ್ರ್ಯ ಹೋರಾಟದ ಜೊತೆಗೆ ಸಮಾನತೆಗೂ ಅವರು ಹೋರಾಡಿದ್ದರು. ಸಮಾಜ ಪರಿವರ್ತನೆಯ ತುಡಿತ ಹೊಂದಿದ್ದ ಅವರು ದೇಶದ ಪ್ರಗತಿಯೇ ಪ್ರತಿಯೊಬ್ಬರ ಪ್ರಗತಿ ಎಂದು ನಂಬಿದ್ದರು’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಕೆ.ಉಮೇಶ್, ದಲಿತ ಸಂಘಟನೆಗಳ ಪ್ರಮುಖರಾದ ದೀಪಕ್ ಕುಡಾಳಕರ, ನಾಗರಾಜ ತಳವಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-20-2012989913

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.