ಕಾರವಾರ: ‘ವೃತ್ತಿಪರ ಶಿಕ್ಷಣ ಕೋರ್ಸುಗಳಿಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜಿಲ್ಲೆಯಲ್ಲಿ ಸುಗಮವಾಗಿ, ಅಹಿತಕರ ಘಟನೆಗಳಿಲ್ಲದೆ ನಡೆಯಲು ಎಚ್ಚರಿಕೆ ವಹಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಿಇಟಿ ಪರೀಕ್ಷೆ ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ‘ಏ.23 ಮತ್ತು 24ರಂದು ನಡೆಯಲಿರುವ ಪರೀಕ್ಷೆ ವೇಳೆ ಎಲ್ಲಿಯೂ ಪ್ರಶ್ನೆ ಪತ್ರಿಕೆ ಸೋರಿಕೆ, ನಕಲು ಮಾಡುವ, ಪರೀಕ್ಷೆಗೆ ಅಡ್ಡಿಪಡಿಸುವಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರವಹಿಸಬೇಕು’ ಎಂದು ಸೂಚಿಸಿದರು.

‘ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ, ವಿದ್ಯುತ್, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದಂತಹ ಮೂಲಸೌಕರ್ಯ ವ್ಯವಸ್ಥೆಗಳು ಇರುವುದನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮುಂಚಿತವಾಗಿ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು. ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ಸಾಗಾಟದ ವಾಹನಗಳಿಗೆ ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತೆ ಒದಗಿಸಬೇಕು’ ಎಂದರು.

‘ಪರೀಕ್ಷೆ ನಡೆಯುವ ಕೇಂದ್ರಗಳ ಪ್ರತಿ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಕೆ ಆಗಿರಬೇಕು. ಅವು ಸುಸ್ಥಿತಿಯಲ್ಲಿರುವಂತೆ ಪರಿಶೀಲನೆ ನಡೆಸಬೇಕು. ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಪ್ರತಿ ಕೇಂದ್ರಗಳ ಪರೀಕ್ಷೆ ಮೇಲೆ ವೆಬ್ ಕಾಸ್ಟಿಂಗ್ ಮೂಲಕ ನಿಗಾ ಇರಿಸಲಾಗುವುದು’ ಎಂದರು.

‘ಪರೀಕ್ಷಾ ಕೇಂದ್ರಕ್ಕೆ ಕ್ಯಾಲ್ಕುಲೇಟರ್ ಸೇರಿದಂತೆ ಎಲ್ಲಾ ರೀತಿಯ ಎಲೆಕ್ಟ್ರಾನಿಕ್ ಸಾಧನಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇದಾಜ್ಞೆ ವಿಧಿಸಲಾಗುವುದು’ ಎಂದೂ ಹೇಳಿದರು.

‘ಸೆಕೆ ವಿಪರೀತವಾಗಿರುವುದರಿಂದ ವಿದ್ಯಾರ್ಥಿಗಳ ಆರೋಗ್ಯ ಕಾಳಜಿಗೂ ಆದ್ಯತೆ ನೀಡಬೇಕು. ಪರೀಕ್ಷಾ ಕೇಂದ್ರಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜಿಸಬೇಕು. ಪರೀಕ್ಷೆ ನಡೆಯುವ ದಿನ ಬಸ್ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಎಚ್ಚರವಹಿಸಬೇಕು’ ಎಂದರು.

‘ಜಿಲ್ಲೆಯಲ್ಲಿ ಒಟ್ಟು 14 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 4,498 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸತೀಶ ನಾಯ್ಕ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಕರೀಂ ಅಸಾದಿ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-20-666018461

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.