ಕಾರವಾರ: ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ನಿಯಂತ್ರಿಸಲು ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ರಚಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ನ (ಎಸ್ಎಫ್ಐ) ಜಿಲ್ಲಾ ಸಮಿತಿಯಿಂದ ಗುರುವಾರ ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅವರಿಗೆ ಮನವಿ ಸಲ್ಲಿಸಲಾಯಿತು.

‘ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಮತ್ತು ಶಿಕ್ಷಣ ಇಲಾಖೆಯ ಮುಖ್ಯಸ್ಥರು, ಪಾಲಕರು, ವಿದ್ಯಾರ್ಥಿ ಸಂಘಟನೆಯ ಪ್ರತಿನಿಧಿಗಳ ಜಂಟಿ ಸಭೆಯನ್ನು ಕರೆಯಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳು ಪಾಲಕರಿಂದ ಮಿತಿಮೀರಿ ಡೊನೇಷನ್ ವಸೂಲು ಮಾಡುವುದನ್ನು ತಪ್ಪಿಸಬೇಕು’ ಎಂದು ಒತ್ತಾಯಿಸಿದರು.

‘ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಹೊಸ ಕಾಯ್ದೆ ಜಾರಿ ಮಾಡಬೇಕು. ಕ್ಷೇತ್ರ ಶಿಕ್ಷಣಾಧಿಕಾರಿ ನಿಗದಿಪಡಿಸಿದ ಶುಲ್ಕದ ವಿವರಗಳನ್ನು ಶಾಲಾ, ಕಾಲೇಜುಗಳ ಮುಂದೆ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರದರ್ಶಿಸಬೇಕು. ನಿಯಮ ಮೀರಿ ಡೊನೇಷನ್ ಪಡೆದ ಖಾಸಗಿ ಶಿಕ್ಷಣ ಸಂಸ್ಥೆಗೆ ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ಕ್ರಮ ತೆಗೆದುಕೊಳ್ಳಬೇಕು. ಅನಧಿಕೃತ ಖಾಸಗಿ ಶಾಲೆ ಕಾಲೇಜುಗಳ ಪಟ್ಟಿ ಬಿಡುಗಡೆ ಮಾಡಿ ಅಂತಹ ಅನಧಿಕೃತ ಶಾಲೆಯ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಖಾಸಗಿ ಶಾಲೆಗಳಲ್ಲಿ ಪುಸ್ತಕ, ನೋಟ್ಬುಕ್, ಶಾಲಾ ಬ್ಯಾಗ್, ಬೂಟು, ಬಟ್ಟೆ ಕಡ್ಡಾಯವಾಗಿ ಶಾಲೆಗಳಲ್ಲಿ ತೆಗೆದುಕೊಳ್ಳಬೇಕೆಂದು ಒತ್ತಾಯ ಮಾಡಿ ಸಾವಿರಾರು ಹಣ ವಸೂಲಿ ಮಾಡುವುದಕ್ಕೆ ಕಡಿವಾಣ ಬೀಳಲಿ’ ಎಂಬ ಬೇಡಿಕೆ ಮಂಡಿಸಿದರು.

ಎಸ್ಎಫ್ಐ ಜಿಲ್ಲಾ ಘಟಕದ ಸಂಚಾಲಕ ಗಣೇಶ ರಾಠೋಡ, ವೀರೇಶ, ಯಲ್ಲಪ್ಪ, ಮಲ್ಲಿಕಾರ್ಜುನ, ಶೇಕಪ್ಪ, ಓಂಕಾರ, ಶಶಿಧರ್, ಅರ್ಜುನ, ಆಕಾಶ, ಆದರ್ಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-20-391444090

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.