ಕಾಸರಗೋಡು: ಭಾಷೆ, ಸಂಸ್ಕೃತಿಯ ಬೆಳವಣಿಗೆಯ ದೃಷ್ಟಿಯಿಂದ ಸಾಂಸ್ಕೃತಿಕ ವಿಲೀನ ನಡೆಯಬೇಕಿದೆ. ಇದಕ್ಕೆ ಪೂರಕವಾಗಿ ನಮ್ಮ ಮನಸ್ಸಿನ ಗಡಿಗಳನ್ನು ಅಪ್ರಸ್ತುತಗೊಳಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು.

ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮಿತಿಯಿಂದ ಉಪ್ಪಳ ವ್ಯಾಪಾರ ಭವನ ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಕರ್ತರ ಮಕ್ಕಳಿಗೆ ಕಲಿಕೋಪರಣ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾಷೆಗಳ ಕಲಿಕೆ ಕುರಿತು ಗಂಭೀರ ಚಿಂತನೆ ಬೇಕು ಎಂದು ವಿಶ್ಲೇಷಿಸಿದ ಅವರು ಕನ್ನಡ ಬೇಡ ಎಂದು ಇಂಗ್ಲಿಷ್ ಕಲಿಕೆಗೆ ತೊಡಗಿಕೊಂಡಿರುವ ಜನ ಆ ಮಾಧ್ಯಮದ ಅಧ್ಯಾಪನ ಮತ್ತು ಅಧ್ಯಯನ ಸಮರ್ಪಕವಾಗಿದೆಯೇ ಎಂದು ಚಿಂತನೆ ನಡೆಸಬೇಕು ಎಂದರು.

ಮುಖ್ಯ ಅತಿಥಿಯಾಗಿದ್ದ ಶಾಸಕ ಎ.ಕೆ.ಎಂ.ಅಶ್ರಫ್ ಮಾತನಾಡಿ, ಭಾಷಾ ಅಲ್ಪಸಂಖ್ಯಾತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೇರಳದಲ್ಲೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಯತ್ನಿಸುವುದಾಗಿ ಭರವಸೆ ನೀಡಿದರು.

ಸಂಘದ ಅಧ್ಯಕ್ಷ ರವಿ ನಾಯ್ಕಾಪು ಅಧ್ಯಕ್ಷತೆ ವಹಿಸಿದ್ದರು. ದುಬೈನ ಶಾಫಿ ಬಂಡಸಾಲ ಅವರ ಕೃತಿ ‘ಮನದ ಮಾತು’ ಕುರಿತು ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಪರಿಚಯ ಮಾಡಿದರು.

ಶಾಫಿ ಬಂಡಸಾಲ ಮತ್ತು ನಿವೃತ್ತ ಪ್ರಾಂಶುಪಾಲ ಪ್ರೊ.ಎ.ಶ್ರೀನಾಥ್ ಅವರಿಗೆ ಅಭಿನಂದನೆ ನಡೆಯಿತು. ಕನ್ನಡ ಪರ ಸಂಘಟನೆಗಳ ಪ್ರತಿನಿಧಿಗಳಾದ ಎಸ್.ಪ್ರದೀಪ್ ಕುಮಾರ ಕಲ್ಕೂರ, ಎ.ಆರ್.ಸುಬ್ಬಯ್ಯಕಟ್ಟೆ, ತೆಕ್ಕೇಕರೆ ಶಂಕರನಾರಾಯಣ ಭಟ್, ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ರಾಘವ ಚೇರಾಲ್, ಅರಿಬೈಲು ಗೋಪಾಲ ಶೆಟ್ಟಿ, ಸುಜಾತಾ ಶೆಟ್ಟಿ, ಇಬ್ರಾಹಿಂ, ಶಿವರಾಮ ಕಾಸರಗೋಡು ಭಾಗವಹಿಸಿದ್ದರು.

ಕೆ.ಗಂಗಾಧರ ತೆಕ್ಕೆಮೂಲೆ ಸ್ವಾಗತಿಸಿದರು. ಪುರುಷೋತ್ತಮ ಭಟ್ ಪೈವಳಿಕೆ ಕಾರ್ಯಕ್ರಮ ನಿರೂಪಿಸಿದರು. ಜಯ ಮಣಿಯಂಪಾರೆ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-29-1675372432

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.